
ಮಂಗಳೂರು: ಹವ್ಯಕ ಸಮಾಜದ ಗುರಿಕ್ಕಾರರ ಕುಟುಂಬದ ಮೇಲೆ ಅನ್ಯ ಕೋಮಿನವರು ನಡೆಸಿದ್ದಾರೆ ಎನ್ನಲಾದ ಹಲ್ಲೆ ಘಟನೆಯನ್ನು ಹವ್ಯಕ ಮಹಾಮಂಡಲ ತೀವ್ರವಾಗಿ ಖಂಡಿಸಿದೆ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಪುತ್ತೂರು ತಾಲೂಕು ಕೆದಿಲದಲ್ಲಿರುವ ಶಿವರಾಮ ಭಟ್ಟರು ಶಿಸ್ತಿನಿಂದ ಜೀವನ ನಡೆಸುತ್ತಾ ಬಂದವರು. ಆಸ್ತಿ ವಿಚಾರದಲ್ಲಿ ಅನ್ಯ ಕೋಮಿನವರು ಅವರ ಮೇಲೆ ಹಾಗೂ ಪತ್ನಿಯ ಮೇಲೆ ಹಲ್ಲೆ ನಡೆಸಿರುವುದನ್ನು ಹವ್ಯಕ ಸಮಾಜ ಸಹಿಸುವುದಿಲ್ಲ ಎಂದು ಮಹಾಮಂಡಲ ಅಧ್ಯಕ್ಷರಾದ ಮೋಹನ ಭಾಸ್ಕರ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ, ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾದೀತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ