ಮಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದನ್ನು ಖಂಡಿಸಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯರವರ ನೇತೃತ್ವದಲ್ಲಿ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋಚ ಪ್ರಧಾನ ಕಾರ್ಯದರ್ಶಿಗಳಾದ ಭರತರಾಜ್, ಉಮೇಶ್ ಕುಲಾಲ್, ಮಾಜಿ ಸಚಿವರಾದ ನಾಗರಾಜ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷರು ಮಂಜುಳಾ ರಾವ್, ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ, ಪ್ರಕಾಶ್ ಗರೋಡಿ, ಸಚಿನ್ ರಾಜ್ ರಾಯ್, ವಿಜಯಕುಮಾರ್ ಶೆಟ್ಟಿ, ದಿನೇಶ್ ಅಮ್ತೂರ್, ನಿತಿನ್ ಭಂಡಾರಿ, ಕುಮಾರ್ ಪ್ರಸಾದ್ ಹಾಗೂ ಪಕ್ಷದ ಕಾರ್ಯಕರ್ತರು ಬಾಗಿಯಾದರು.
ಪಾಕಿಸ್ತಾನ ಪರ ಘೋಷಣೆ ಹಾಕಿದ ದೇಶದ್ರೋಹಿ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವುದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ರಾಷ್ಟ್ರ ಭಕ್ತರ ಹಕ್ಕನ್ನು ಹತ್ತಿಕ್ಕಿ ಅನ್ಯಾಯ ಮಾಡುತ್ತಿದೆ ಎಂದು ಆಪಾದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ