ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷೆ

Upayuktha
0



ನವದೆಹಲಿ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಮೊದಲ ಬಾರಿಗೆ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ಭಾನುವಾರ ಪ್ರಕಟಿಸಿದೆ.




ಹಿಂದಿ, ಇಂಗ್ಲಿಷ್ ಜೊತೆಗೆ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ದೇಶದಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ನಡೆಯು ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ.




“ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು ಸಿಎಪಿಎಫ್ ನೇಮಕಾತಿ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ನಿರ್ಧರಿಸಿದೆ. ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸುವ ಅಮಿತ್ ಶಾ ಅವರ ಉಪಕ್ರಮದ ಭಾಗವಾಗಿ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಗೃಹ ಸಚಿವಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ.




ಕಳೆದ ವರ್ಷ, ದಕ್ಷಿಣ ರಾಜ್ಯಗಳ ರಾಜಕೀಯ ನಾಯಕರು ನೇಮಕಾತಿ ಪರೀಕ್ಷೆಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಆಯ್ಕೆಗಳನ್ನು ಆಕ್ಷೇಪಿಸಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಸಿಎಪಿಎಫ್ ಪರೀಕ್ಷೆಯಿಂದ ತಮಿಳನ್ನು ಹೊರಗಿಟ್ಟಿರುವುದು ತಾರತಮ್ಯ ಮತ್ತು ಏಕಪಕ್ಷೀಯವಾಗಿದೆ ಎಂದು ಹೇಳಿದ್ದರು. ಅವರು ರಾಜ್ಯ ಭಾಷೆಗಳ ಆಯ್ಕೆಯನ್ನು ಸೇರಿಸಿ ಪರೀಕ್ಷೆಗೆ ಪರಿಷ್ಕೃತ ಅಧಿಸೂಚನೆಯನ್ನು ಸಹ ಕೋರಿದ್ದರು.




ಸಿಎಪಿಎಫ್ ನೇಮಕಾತಿ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ಸಶಸ್ತ್ರ ಸೀಮಾ ಬಾಲ್ (ಎಸ್‌ಎಸ್‌ಬಿ) ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ಗಳನ್ನು ಒಳಗೊಂಡಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top