ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ಮಂಜೂರು: ನಳಿನ್ ಹರ್ಷ

Upayuktha
0



ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ  ನಳಿನ್ ಕುಮಾರ್ ರವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದೆ.  



ಮಾನ್ಯ ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರಿಗೆ ಭೇಟಿಯಾಗಿ ಮಂಗಳೂರಿನಲ್ಲಿ CGHS ವೆಲ್ ನೆಸ್ ಸೆಂಟರ್ ನ್ನು ತೆರೆಯುವಂತೆ ಮನವಿ ಮಾಡಿದ್ದರು.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನ್ ಸುಖ್ ಮಾಂಡವೀಯ ರವರು  ನಳಿನ್ ಕುಮಾರ್ ರವರಿಗೆ ಪತ್ರ ಬರೆದು ಮಂಗಳೂರು ಸೇರಿದಂತೆ ದೇಶದ 20 ನಗರಗಳಲ್ಲಿ CGHS ವೆಲ್ ನೆಸ್ ಸೆಂಟರ್ ಗಳನ್ನು ತೆರೆಯುತ್ತಿರುವುದಾಗಿ ತಿಳಿಸಿದ್ದಾರೆ. 




ದಕ್ಷಿಣ ಕನ್ನಡ ಹಾಗೂ ನೆರೆಯ ಜಿಲ್ಲೆಗಳ 50ಕ್ಕೂ ಅಧಿಕ ಕೇಂದ್ರ ಸರ್ಕಾರದ ಇಲಾಖೆಗಳ ಸುಮಾರು 5500 ಉದ್ಯೋಗಿಗಳಿದ್ದು,  29000 ಕ್ಕೂ ಅಧಿಕ ನಿವೃತ್ತ ಕೇಂದ್ರ ಸರ್ಕಾರದ ಉದ್ಯೋಗಿಗಳಿದ್ದಾರೆ. ಮಂಗಳೂರಿನಲ್ಲಿ ಈ ಕೇಂದ್ರ ಪ್ರಾರಂಭವಾಗುವುದರಿಂದ  ಅವರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ. ತಮ್ಮ ಮನವಿಯನ್ನು ಪುರಸ್ಕರಿಸಿ ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ನ್ನು ಮಂಜೂರು ಮಾಡಿದ ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಧ  ಡಾ. ಮನ್ ಸುಖ್ ಮಾಂಡವೀಯರವರಿಗೆ ಮಾನ್ಯ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top