ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ

Upayuktha
0


ಮಂಗಳೂರು
: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ  ನಳಿನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. 



ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631  ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. 



ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರ ಆರು ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ರವರಿಗೆ ಸಂಸದ  ನಳಿನ್ ಕುಮಾರ್ ಕಟೀಲ್ ರವರು ಕೃತಜ್ಞತೆ ಸಲ್ಲಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top