ಫೆ. 17: ಮೈಸೂರಿನಲ್ಲಿ ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಅರ್ಪಿತಾ ನಾಯಕ

Upayuktha
0
  • ಮೈಸೂರಿನ ನಾದ ವಿದ್ಯಾಲಯ ಸಂಸ್ಥೆ ಆಯೋಜನೆ
  • ಜಗನ್ಮೋಹನ ಅರಮನೆಯಲ್ಲಿ ಫೆ. 17 ಸಂಜೆ ಕಾರ್ಯಕ್ರಮ





ಮೈಸೂರು:  ಮೈಸೂರಿನ ನಾದ ವಿದ್ಯಾಲಯ ಅಕಾಡೆಮಿ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ ವಿದುಷಿ ಮಿತ್ರಾ ನವೀನ್ ಅವರ ಶಿಷ್ಯೆ, ಬಿಜಿನೆಸ್ ಅನಾಲಿಸ್ಟ್ ಅರ್ಪಿತಾ ನಾಯಕ ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ. ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ  ಫೆ. 17ರ ಸಂಜೆ 5ಕ್ಕೆ ಆಯೋಜನೆಗೊಂಡಿರುವ ರಂಗಪ್ರವೇಶ ಕಾರ್ಯಕ್ರಮಕ್ಕೆ ಬೆಂಗಳೂರಿನ ನೃತ್ಯಗಂಗಾ ಪ್ರದರ್ಶನ ಕಲಾ ಕೇಂದ್ರದ ನಿರ್ದೇಶಕಿ ವಿದುಷಿ ರೂಪಶ್ರೀ ಮಧುಸೂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಶಾಸಕ ಟಿ.ಎಸ್. ಶ್ರೀವತ್ಸ ಸಾಕ್ಷಿಯಾಗಲಿದ್ದಾರೆ. ವಿದುಷಿ ಮಿತ್ರಾ ನವೀನ್, ಉದಯನಾಯಕ ಮತ್ತು ಸುವರ್ಣಾ ನಾಯಕ ಉಪಸ್ಥಿತರಿರಲಿದ್ದಾರೆ.  



ಹಿಮ್ಮೇಳ: ಕಲಾವಿದೆ ಅರ್ಪಿತಾ ಅವರ ರಂಗಪ್ರವೇಶಕ್ಕೆ ಗುರು ಮಿತ್ರಾ ನವೀನ್ ನಟುವಾಂಗ, ವಿದ್ವಾನ್ ಎಂ. ಎಸ್. ನವೀನ್ ಅಂದಗಾರ್ ಗಾಯನ, ವಿದ್ವಾನ್ ಜಿ.ಎಸ್. ನಾಗರಾಜ್ ಮೃದಂಗ ಮತ್ತು ವಿದ್ವಾನ್ ವಿವೇಕ ಕೃಷ್ಣ ಕೊಳಲು ಪಕ್ಕವಾದ್ಯದಲ್ಲಿ ಸಹಕರಿಸಲಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top