ಫೆ.21: ನಿಟ್ಟೆಯಲ್ಲಿ ವಿದ್ಯಾಭೂಷಣರಿಂದ 'ಭಕ್ತಿಗಾನ ಸುಧಾ'

Upayuktha
0

 



ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವರ್ಷಂಪ್ರತಿ ತಾಂತ್ರಿಕ-ಸಾಂಸ್ಕೃತಿಕ ಹಬ್ಬವಾದ 'ಇನ್ಕ್ರೆಡಿಯಾ'ದ ಉದ್ಘಾಟನೆಯು ಫೆ.21 ರಂದು ಸಂಜೆ 4.15ಕ್ಕೆ ನಿಟ್ಟೆ ಕ್ಯಾಂಪಸ್ ನ ಸದಾನಂದ ಸಭಾಂಗಣದಲ್ಲಿ ನಡೆಯಲಿದೆ. ಈ ಉತ್ಸವವನ್ನು ಶ್ರೇಷ್ಠ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕ ಶ್ರೀ ವಿದ್ಯಾಭೂಷಣ ಅವರು ಉದ್ಘಾಟಿಸಲಿರುವರು.



ಕಾರ್ಯಕ್ರಮದಲ್ಲಿ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ  ಎನ್ ವಿನಯ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಲಿರುವರು. ಕರ್ನಾಟಕ ವಿಧಾನ ಪರಿಷತ್ ನ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು.



ಈ ಕಾರ್ಯಕ್ರಮದ ಅಂಗವಾಗಿ ಸಂಜೆ 4.30 ರಿಂದ ವಿದ್ಯಾಭೂಷಣರಿಂದ 'ಭಕ್ತಿಗಾನ ಸುಧಾ' ಎಂಬ ಎರಡು ಗಂಟೆಗಳ ಕಾಲ ಸಂಗೀತ ರಸದೌತಣ ನಡೆಯಲಿದೆ. ಕಲಾಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top