ಫೆ.10: ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ

Chandrashekhara Kulamarva
0



ಸುರತ್ಕಲ್‌: ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್ (ರಿ), ಗೋವಿಂದ ದಾಸ ಕಾಲೇಜಿನ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ, ಹಿರಿಯ ಕವಿಗಳಾಗಿದ್ದ ದಿ. ಡಾ. ಸೀತಾರಾಮ ಆಚಾರ್ಯರ ಕವನ ಸಂಗ್ರಹ “ಮನನ”ದ ಬಿಡುಗಡೆ ಮತ್ತು ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭವು ಫೆಬ್ರವರಿ 10, 2024ರಂದು ಗೋವಿಂದ ದಾಸ ಕಾಲೇಜಿನಲ್ಲಿ ನಡೆಯಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಅಧ್ಯಕ್ಷ ರಮೇಶ್ ರಾವ್ ಎಂ. ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸುಧೀರ್ ಶೆಟ್ಟಿ ಕಣ್ಣೂರು ಭಾಗವಹಿಸಲಿದ್ದಾರೆ. 


ಗೌರವ ಅತಿಥಿಗಳಾಗಿ ಹಿರಿಯ ನಾಯಕತ್ವ ತರಬೇತುದಾರ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಪ್ರೊ. (ಮೇಜರ್) ರಾಧಾಕೃಷ್ಣ ಎಂ ಮತ್ತು ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ಉಪಸ್ಥಿತರಿರುತ್ತಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top