ಫೆ.03 ರಿಂದ ಮಾತಾ ಅಮೃತಾನಂದಮಯಿ ಮಠದಲ್ಲಿ ಉಚಿತ ವೈದ್ಯಕೀಯ ಸೇವೆ ಆರಂಭ

Upayuktha
1 minute read
0



ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಕಳೆದ 25 ವರ್ಷಗಳಿಂದ ನಡೆದು ಬಂದ ಮಾನವೀಯ ಸೇವಾಯೋಜನೆಗಳ ಮುಂದುವರಿದ ಭಾಗವಾಗಿ ಎ.ಜೆ.ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ರವರ ಸಹಯೋಗದೊಂದಿಗೆ ಅಮೃತ ಉಚಿತ ವೈದ್ಯಕೀಯ ಸೇವೆಗಳನ್ನು ಫೆ.3 ಶನಿವಾರದಿಂದ ಪ್ರಾರಂಭಿಸಲಾಗುವುದು. 



ಬೋಳೂರಿನ ಅಮೃತಾನಂದಮಯಿ ಮಠದ ಆವರಣದಲ್ಲಿ ಪ್ರತಿ ಶನಿವಾರ ಬೆಳಗ್ಗೆ10 ರಿಂದ ಮಧ್ಯಾಹ್ನ12 ರ ವರೆಗೆ ಈ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಸಲಹೆಗಳನ್ನು ನೀಡಲಾಗುವುದು. ಸಾರ್ವಜನಿಕ ಸ್ವಾಸ್ಥ್ಯ ಸಂರಕ್ಷಣೆಗಾಗಿ ಈ ವೈದ್ಯಕೀಯ ಸೇವೆಗಳನ್ನು ದಿನಾಂಕ 3 ರಂದು ಬೆಳಗ್ಗೆ 10 ಗಂಟೆಗೆ ಮಠದ ಮುಖ್ಯಸ್ಥೆ ಸಂಪೂಜ್ಯ ಸ್ವಾಮಿನಿ ಮಂಗಳಾಮೃತಪ್ರಾಣ ಲೋಕಾರ್ಪಣೆಗೊಳಿಸುವರು.



 ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್‌ (ರಿ) ಇದರ ಉಪಾಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಹಾಗೂ ಡಾ.ಜೀವರಾಜ್ ಸೊರಕೆ, ಎ.ಜೆ.ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನ ಡೀನ್ ಡಾ.ಅಶೋಕ ಹೆಗ್ಡೆ ಮತ್ತು ಯೋಗರತ್ನ  ಗೋಪಾಲಕೃಷ್ಣ ದೇಲಂಪಾಡಿ ಗಣ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಸಾರ್ವಜನಿಕರು ಈ ಉಚಿತ ವೈದ್ಯಕೀಯ ಸೇವೆಯ ಪ್ರಯೋಜನ ಪಡೆಯುವಂತೆ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತಕುಮಾರ್ ಪೆರ್ಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top