ಇಂದು ದ.ಕ. ಜಿಲ್ಲೆಯ ಎರಡು ಎನ್.ಹೆಚ್. ಕಾಮಗಾರಿಗಳಿಗೆ ಗಡ್ಕರಿ ಶಿಲಾನ್ಯಾಸ

Upayuktha
0



ದಕ್ಷಿಣ ಕನ್ನಡ ಜಿಲ್ಲೆಯ ಎರಡು ಹೆದ್ದಾರಿ ಕಾಮಗಾರಿಗಳಿಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ಫೆ 22 ರಂದು ಶಿಲಾನ್ಯಾಸ ಮಾಡಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್. 73ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ವರೆಗಿನ ಸುಮಾರು 28.50 ಕಿ.ಮೀ. ಉದ್ದದ ದ್ವಿಪಥ ರಸ್ತೆ ಅಗಲೀಕರಣ (ಪೇವ್ಡ್ ಶೋಲ್ಡರ್ ಸಹಿತ) ಕಾಮಗಾರಿ ಸುಮಾರು ಅಂದಾಜು ವೆಚ್ಚ ರೂ.614.00 ಕೋಟಿ ವೆಚ್ಚದಲ್ಲಿ ನಡೆಯಲಿದೆ. 




ಇನ್ನೊಂದು ಕಾಮಗಾರಿ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್.73 ರಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸುಮಾರು  11 ಕಿ.ಮೀ.  ದ್ವಿಪಥ ರಸ್ತೆ ಅಗಲೀಕರಣ (ಪೇವ್ಡ್ ಶೋಲ್ಡರ್ ಸಹಿತ) ಸುಮಾರು ಅಂದಾಜು ವೆಚ್ಚ ರೂ.344.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.




ಜಿಲ್ಲೆಯ ಈ ಎರಡೂ ಕಾಮಗಾರಿಗಳ ಸಹಿತ ಸುಮಾರು ರೂ.6200 ಕೋಟಿ ವೆಚ್ಚದ ವಿವಿಧ ಹೆದ್ದಾರಿಗಳನ್ನು ರಾಷ್ಟ್ರಕ್ಕೆ ಸಮರ್ಪಣೆ/ಶಿಲಾನ್ಯಾಸ ಕಾರ್ಯಕ್ರಮವನ್ನು ಶಿವಮೊಗ್ಗ ದಿಂದ ಮಾನ್ಯ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವರಾದ  ನಿತಿನ್ ಗಡ್ಕರಿಯವರು ನೆರವೇರಿಸಲಿದ್ದಾರೆ. 



ಮೇಲ್ಕಂಡ ಕಾಮಗಾರಿಗಳಿಂದ ಕರಾವಳಿ ಪ್ರದೇಶಕ್ಕೆ ಉತ್ತಮ ಸಂಪರ್ಕ ದೊರೆಯಲಿದ್ದು, ಪ್ರಯಾಣಿಕರಿಗೆ, ಆರ್ಥಿಕ ಚಟುವಟಿಕೆಗಳಿಗೆ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುಕೂಲ ದೊರೆಯಲಿದೆ. ಈ ಯೋಜನೆಗಳಿಗೆ ಮಂಜೂರಾತಿ ನೀಡಿದ ನೆಚ್ಚಿನ ಪ್ರಧಾನಿ  ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top