ಮಂಗಳೂರು: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಇತ್ತೀಚೆಗೆ ನಿರಂತರ 12 ಗಂಟೆಗಳ ಕಾಲ ಕನ್ನಡದ ಗೀತೆಗಳನ್ನು ಹಾಡುವ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಿದ ಗಾಯನ ತಂಡದ ಮುಖ್ಯಸ್ಥ ಗಂಗಾಧರ್ ಗಾಂಧಿಯವರನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು. ಟಿ.ಖಾದರ್ ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ವಿಶ್ವ ದಾಖಲೆ ಪ್ರಮಾಣ ಪತ್ರ ನೀಡಿ , ಹಾರ ಪೇಟಾ ಶಾಲು ತೊಡಿಸಿ ಅಭಿನಂದಿಸಿದರು.
ಕಾರ್ಯಕ್ರಮ ಆಯೋಜಕ ಸಂಸ್ಥೆ NSCDF ನ ಅಂತಾರಾಷ್ಟ್ರೀಯ ವಕ್ತಾರೆ ಮಮತಾ ಕೋಟ್ಯಾನ್ ಮತ್ತಿತರರು ಉಪಸ್ಥಿತಿ ಇದ್ದರು. 12 ಗಂಟೆಗಳ ನಿರಂತರ ಗಾಯನ ಕಾರ್ಯ್ರಮದಲ್ಲಿ ರಾಣಿ ಪುಷ್ಪಲತಾ ದೇವಿ, ವರ್ಷ ಕರ್ಕೇರಾ , ರಕ್ಷ ಸರ್ಪಂಗಳ, ನೇತ್ರ ಖುಶಿ ಯುಗಳ ಗೀತೆಗಳಿಗೆ ಧ್ವನಿಯಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ