ಹಾಸನ : ವಿದ್ಯಾರ್ಥಿಗಳು ಸತತ ಅಭ್ಯಾಸದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಆ ಮೂಲಕ ಶಾಲೆಯು ಉತ್ತಮ ಗುಣಮಟ್ಟದ ಫಲಿತಾಂಶವನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬಬೇಕು ಎಂದು ಜಿಲ್ಲಾ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿ ತಮ್ಮಣ್ಣ ಗೌಡ ಹೇಳಿದರು.
ನಗರದ ದೇವೇಗೌಡನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ಪೂರ್ವಸಿದ್ಧತಾ ಪರೀಕ್ಷೆಯನ್ನು ವೀಕ್ಷಿಸಿದರು. 8ನೇ ತರಗತಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಮಕ್ಕಳ ಕಲಿಕಾ ಪ್ರಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ವಿದ್ಯಾರ್ಥಿಗಳೆಲ್ಲರೂ ಎ+ ಮತ್ತು ಎ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ತಿಳಿಸಿದರು. ನಂತರ ಶಿಕ್ಷಕರೊಡನೆ ಸಂವಾದ ನಡೆಸಿ ತಾಲ್ಲೂಕು ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ವಿಶ್ಲೇಷಣೆಯನ್ನು ಪರಿಶೀಲಿಸಿ, ಜಿಲ್ಲಾ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಇನ್ನೂ ಉತ್ತಮ ಫಲಿತಾಂಶ ನೀಡುವಂತೆ ಮತ್ತು ಹತ್ತನೇ ತರಗತಿ ಮುಖ್ಯ ಪರೀಕ್ಷೆಯಲ್ಲಿ ಫಲಿತಾಂಶವನ್ನು ಉತ್ತಮಪಡಿಸುವ ಬಗ್ಗೆ ಮತ್ತುವಿದ್ಯಾರ್ಥಿಗಳಿಗೆ ಹೆಚ್ಚಿನ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಗಳಿಸಲು ಶಿಕ್ಷಕರೆಲ್ಲರೂ ಮುಂದಾಗಬೇಕು ಎಂದು ಮನವರಿಕೆ ಮಾಡಿಕೊಟ್ಟರು. ಪ್ರತೀ ವಿಷಯದಲ್ಲಿಯೂ ಮಗು ಹೆಚ್ಚಿನ ಅಂಕಗಳನ್ನು ಗಳಿಸಲು ಶಿಕ್ತಕರು ಒತ್ತು ನೀಡಬೇಕು ಎಂದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕರಾದ ಹೇಮಾ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ