ವಿದ್ಯಾರ್ಥಿಗಳ ನಿರಂತರ ಅಧ್ಯಯನದಿಂದ ಗುಣಮಟ್ಟದ ಫಲಿತಾಂಶ ಸಾಧ್ಯ : ಶಿಕ್ಷಣಾಧಿಕಾರಿ ತಮ್ಮಣ್ಣ ಗೌಡ

Upayuktha
0

 


ಹಾಸನ: ವಿದ್ಯಾರ್ಥಿಗಳು ನಿರಂತರ  ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಗುಣಮಟ್ಟದ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಆ ಮೂಲಕ ಶಾಲೆಯು ಉತ್ತಮ ಗುಣಮಟ್ಟದ ಫಲಿತಾಂಶವನ್ನು ಪಡೆಯುತ್ತದೆ. ಆ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳೂ ಉತ್ತಮ ಸಾಧನಗಳನ್ನು ಮಾಡಬಹುದು. ಈ ನಿಟ್ಟಿನಲ್ಲಿ ಶಿಕ್ಷಕರು  ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬಬೇಕು ಎಂದು ಜಿಲ್ಲಾ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿ ತಮ್ಮಣ್ಣ ಗೌಡ ಹೇಳಿದರು. 


ಹಾಸನ ಜಿಲ್ಲಾ ಕೇಂದ್ರದಿಂದ ದೂರದಲ್ಲಿರುವ ಗ್ರಾಮೀಣ ಭಾಗದ ಜನತಾ ಪ್ರೌಢಶಾಲೆ, ಹೆರಗು ಗ್ರಾಮದ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಹತ್ತನೇ ತರಗತಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಪ್ರಗತಿಯ ಕುರಿತು ಸಂವಾದ ನಡೆಸಿದರು. ಜಿಲ್ಲಾ ಮಟ್ಟದ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಪ್ರಗತಿಯ ಕುರಿತು ಮಾತನಾಡಿದರು. ಮುಂಬರುವ ಪಬ್ಲಿಕ್ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಎ+ ಮತ್ತು ಎ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ತಿಳಿಸಿದರು. ನಂತರ ಶಿಕ್ಷಕರ ಜೊತೆ ಸಂವಾದ ನಡೆಸಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ವಿಶ್ಲೇಷಣೆಯನ್ನು ಪರಿಶೀಲಿಸಿ, ಮುಂಬರುವ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಇನ್ನೂ ಉತ್ತಮ ಫಲಿತಾಂಶ ನೀಡುವಂತೆ ಸಲಹೆ ನೀಡಿದರು. ಹತ್ತನೇ ತರಗತಿ ಮುಖ್ಯ ಪರೀಕ್ಷೆಯಲ್ಲಿ ಫಲಿತಾಂಶವನ್ನು ಉತ್ತಮಪಡಿಸುವ ಬಗ್ಗೆ ಮತ್ತುವಿದ್ಯಾರ್ಥಿಗಳಿಗೆ ಹೆಚ್ಚಿನ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಗಳಿಸಲು ಶಿಕ್ಷಕರೆಲ್ಲರೂ ಮುಂದಾಗಬೇಕು ಎಂದು ಮನವರಿಕೆ ಮಾಡಿಕೊಟ್ಟರು. ಪ್ರತೀ ವಿಷಯದಲ್ಲಿಯೂ ಮಗು ಹೆಚ್ಚಿನ ಅಂಕಗಳನ್ನು ಗಳಿಸಲು ಶಿಕ್ಷಕರು ಹೆಚ್ಚು ಗಮನ ನೀಡಬೇಕು ಎಂದರು. ಈ ಹಿನ್ನೆಲೆಯಲ್ಲಿ ಎಸ್.ಡಿ.ಎಂ.ಸಿ. ಸಮಿತಿ ಮತ್ತು ಪೋಷಕರ ಸಹಕಾರವನ್ನು ಪಡೆದುಕೊಳ್ಳುವಂತೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಧರ್ಮಪ್ಪ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top