ಹಾಸನ: ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮವಿಶ್ವಾಸ ದಿಂದ ಮುಂಬರುವ ಪರೀಕ್ಷೆಗಳನ್ನು ಎದುರಿಸಬೇಕು. ಯಾವುದೇ ಪರಿಸ್ಥಿತಿಯಲ್ಲೂ ಎದೆಗುಂದಬಾರದು. ಈ ನಿಟ್ಟಿನಲ್ಲಿ ಶಿಕ್ಷಕರು ಕೈಜೋಡಿಸಿ ವಿದ್ಯಾರ್ಥಿಗಳಿಗೆ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬಬೇಕು ಎಂದು ಜಿಲ್ಲಾ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿ ತಮ್ಮಣ್ಣ ಗೌಡ ಹೇಳಿದರು.
ಸರ್ಕಾರಿ ಪ್ರೌಢಶಾಲೆ, ದಾಸರಕೊಪ್ಪಲು ಹಾಸನ ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿ ಹತ್ತನೇ ತರಗತಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೆಲ್ಲರೂ A+ ಮತ್ತು A ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ತಿಳಿಸಿದರು. ನಂತರ ಶಿಕ್ಷಕರೊಡನೆ ಸಂವಾದ ನಡೆಸಿ ತಾಲೂಕು ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ವಿಶ್ಲೇಷಣೆಯನ್ನು ಪರಿಶೀಲಿಸಿ, ಹತ್ತನೇ ತರಗತಿ ಫಲಿತಾಂಶವನ್ನು ಉತ್ತಮಪಡಿಸುವ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಗಳಿಸಲು ಶಿಕ್ಷಕರೆಲ್ಲರೂ ಕೈಜೋಡಿಸಬೇಕು ಎಂದು ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಕೆ.ಸಿ. ಮಂಜುನಾಥ್ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ