ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ

Upayuktha
0



ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. 



ಆದರೆ ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.



ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top