ಅಂಬಾನಿ ಮಗನ‌ ಮದುವೆಗೆ ಸಿಂಗಾರಗೊಂಡ ಜಾಮ್ ನಗರ

Upayuktha
0


ಗಾಂಧಿನಗರ: ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಮಗ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ.



ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಂಬಾನಿ ಕುಟುಂಬದಿಂದ ಗುಜರಾತ್‌ನ ಜಾಮ್ ನಗರದಲ್ಲಿ ಹದಿನಾಲ್ಕು ಹೊಸ ದೇಗುಲಗಳ ಸಮುಚ್ಚಯದ ನಿರ್ಮಾಣವನ್ನೇ ಮಾಡಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು, ದೇವ- ದೇವತೆಗಳ ಚಿತ್ರಗಳು, ಮನಮೋಹಕವಾದ ಶಿಲ್ಪಗಳು, ವಾಸ್ತುಶಿಲ್ಪದಿಂದ ಪ್ರೇರಿತವಾದ ಪಾರಂಪರಿಕ ಚಿತ್ರಗಳನ್ನು ಇಲ್ಲಿ ಕಾಣಬಹುದಾಗಿದೆ.


ಭಾರತದ ಶ್ರೀಮಂತ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಅಸ್ಮಿತೆಯನ್ನು ಈ ದೇವಾಲಯ ಸಮುಚ್ಚಯದ ಎಲ್ಲ ಕಡೆಗಳಲ್ಲಿ ಕಾಣಬಹುದಾಗಿದೆ.


ಪರಿಣತರಾದ ಕುಶಲಕರ್ಮಿಗಳು, ಕಲಾವಿದರು ಇದಕ್ಕಾಗಿ ಶ್ರಮಿಸಿದ್ದಾರೆ, ಶ್ರಮಿಸುತ್ತಿದ್ದಾರೆ. ದೇವಾಲಯದ ಕಲಾತ್ಮಕತೆಯನ್ನು ಇನ್ನಷ್ಟು ಸೊಬಗುಗೊಳಿಸುವ ಉದ್ದೇಶದಿಂದ ಸಾಂಪ್ರದಾಯಿಕ ಹಾಗೂ ಹಳೆಯ ತಂತ್ರಗಳನ್ನು ಬಳಸಲಾಗಿದೆ. ಸ್ಥಳೀಯ ಕಲಾವಿದರ ಅದ್ಭುತ ಕೌಶಲ, ಪ್ರತಿಭೆಯನ್ನು ಈ ದೇವಾಲಯ ಸಮುಚ್ಚಯದಲ್ಲಿನ ಕಲಾ ಶ್ರೀಮಂತಿಕೆ ಪ್ರತಿಬಿಂಬಿಸುತ್ತದೆ. ಅದು ಈಗಾಗಲೇ ಗೊತ್ತಿರುವಂತೆ, ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷೆಯೂ ಆಗಿರುವ ನೀತಾ ಅಂಬಾನಿ ಅವರ ದೃಷ್ಟಿಕೋನವೇ ಸ್ಥಳೀಯ ಕಲಾವಿದರಿಗೆ ಉತ್ತೇಜನ, ಪ್ರೋತ್ಸಾಹ ಹಾಗೂ ಅವರ ಜೀವನೋಪಾಯಕ್ಕೆ ಸೂಕ್ತ ಅನುಕೂಲ ಮಾಡಿಕೊಡುವುದಾಗಿದೆ. ಅದರ ಜತೆಗೆ ಭಾರತೀಯ ಪರಂಪರೆ, ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಕಾಪಾಡುವುದು ಹಾಗೂ ಪ್ರಚಾರಮಾಡುವುದು ಇದರ ಉದ್ದೇಶವಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top