ಪಣಂಬೂರು ಬೀಚ್‌ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ಜಾನಪದ ಕಡಲೋತ್ಸವ

Upayuktha
0


ಮಂಗಳೂರು: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ದ.ಕ. ಹಾಗೂ ಕದಳಿ ಬೀಚ್ ಟೂರಿಸಂ ಸಾರಥ್ಯದಲ್ಲಿ ರೋಹನ್‌ ಕಾರ್ಪೊರೇಶನ್ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಪಣಂಬೂರು ಬೀಚ್‌ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿರುವುದು.

ಮಾರ್ಚ್ 1 ರಂದು ಕಾರ‍್ಯಕ್ರಮವನ್ನು ರಾಜ್ಯಪಾಲರಾದ ಗೌರವಾನ್ವಿತ ಥಾವರ್‌ಚಂದ್ ಗೆಹ್ಲೋಟ್ ಕಾರ‍್ಯಕ್ರಮವನ್ನು ಸಂಜೆ 6:30ಕ್ಕೆ ಉದ್ಘಾಟಿಸಲಿರುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸಲಿರುವರು.


ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಮಂಜಮ್ಮ ಜೋಗತಿ, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣೂರು, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರಿನ ಆದಿತ್ಯ ನಂಜರಾಜ್, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಟ್ರಸ್ಟಿ ಏರ್ಯ ಬಾಲಕೃಷ್ಣ ಹೆಗ್ಡೆ ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಅಧಾನಿ ಗ್ರೂಪ್‌ನ ಅಧ್ಯಕ್ಷರಾದ ಕಿಶೋರ್ ಆಳ್ವ, ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬಯಿಯ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ರೋಹನ್ ಕಾರ್ಪೊರೇಶನ್ ಸಂಸ್ಥಾಪಕರಾದ ರೋಹನ್ ಮೊಂತೆರೋ, ದಿವ್ಯರೂಪ ಕನ್‌ಸ್ಟ್ರಕ್ಷನ್ ಮಾಲಕರಾದ ಯಾದವ ಕೋಟ್ಯಾನ್ ಪೆರ್ಮುದೆ, ದೈವ ನರ್ತಕರಾದ ಮುಖೇಶ್ ಗಂಧಕಾಡ್ ಉಪಸ್ಥಿತರಿರುವರು. 7:30ರಿಂದ ಡಾ. ರಮೇಶ್ಚಂದ್ರ ಹಾಗೂ ಕಲಾವತಿ ದಯಾನಂದ ಬಳಗದಿಂದ ಜಾನಪದ ರಸಸಂಜೆ ಕರ‍್ಯಕ್ರಮ ಜರಗಲಿರುವುದು.


ಮಾರ್ಚ್ 2 ರಂದು ಸಂಜೆ 5:30 ರಿಂದ ವಿಚಾರ ಸಂಕೀರ್ಣ ಮತ್ತು ಜಾನಪದ ಪರಿಷತ್ ಪ್ರಶಸ್ತಿ ಪ್ರಧಾನ ಕಾರ‍್ಯಕ್ರಮ ಜರಗಲಿರುವುದು. ಪುತ್ತೂರು ವಿಧಾನ ಸಭಾ ಶಾಸಕರಾದ ಅಶೋಕ್ ಕುಮಾರ್ ರೈ, ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಕ.ಜಾ.ಪ. ಬೆಂಗಳೂರು ಆಡಳಿತಾಧಿಕಾರಿ ನಂದಕುಮಾರ್ ಹೆಗ್ಡೆ ವಹಿಸಲಿರುವರು. ನಿವೃತ್ತ ಕುಲಪತಿಗಳಾದ ಡಾ. ಚಿನ್ನಪ್ಪ ಗೌಡ ಹಾಗೂ ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ಸಾಯಿ ಗೀತಾ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ದಯಾನಂದ ಕತ್ತಲ್‌ಸಾರ್ ಹಾಗೂ ಜಾನಪದ ಸಾಹಿತಿ ಮೈಮ್ ರಾಮ್‌ದಾಸ್ ವಿಷಯ ಮಂಡಿಸಲಿರುವರು. ಮುಖ್ಯ ಅತಿಥಿಗಳಾಗಿ ಕೆ.ಪಿ.ಸಿ.ಸಿ. ಪ್ರಧಾನ ಕಾರ‍್ಯದರ್ಶಿ ಮಿಥುನ್ ರೈ, ರಾಜ್ಯ ಬಿಜೆಪಿ ಪ್ರಧಾನ ಕಾರ‍್ಯದರ್ಶಿ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಕುಳಾಯಿ ಫೌಂಡೇಶನ್ ಅಧ್ಯಕ್ಷರಾದ ಪ್ರತಿಭಾ ಕುಳಾಯಿ, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಮಂಗಳೂರು ಮಹಾನಗರ ಪಾಲಿಕೆ ಕಾರ್ಪೊರೇಟರ್ ಸುಮಿತ್ರ ಉಪಸ್ಥಿತರಿರುವರು. ಸಂಜೆ 7:30ಕ್ಕೆ ಅಜಯ್ ವಾರಿಯರ್ ತಂಡದಿಂದ "ಸಂಗೀತ ರಸ ಸಂಜೆ" ನಡೆಯಲಿದೆ.


ಮಾರ್ಚ್ 3 ರಂದು ಸಂಜೆ 3:00ಕ್ಕೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್‌ರವರು ಗಾಳಿಪಟ ಪ್ರದರ್ಶನದ ಉದ್ಘಾಟಿಸಲಿದ್ದಾರೆ. ಭಂಡಾರಿ ಬಿಲ್ಡರ್ಸ್ ಚೇರ್‌ಮ್ಯಾನ್ ಲಕ್ಷ್ಮೀಶ ಭಂಡಾರಿ ಅಧ್ಯಕ್ಷತೆ ವಹಿಸಲಿರುವರು. ಅಂದು ಸಂಜೆ 4 ರಿಂದ ಜಾನಪದ ಮತ್ತು ಸಾಂಸ್ಕೃತಿಕ ಪ್ರದರ್ಶನ ನಡೆಯಲಿರುವುದು. ಅಂದು ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಜಾನಪದ ಪರಿಷತ್ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಿರುವರು. ಆತ್ಮ ಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಉದ್ಘಾಟಿಸಲಿರುವರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿಧಾನ ಸಭೆ ಸದಸ್ಯರಾದ ಡಾ| ವೈ ಭರತ್ ಶೆಟ್ಟಿ ವಹಿಸಲಿರುವರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಶಸ್ತಿ ಪ್ರದಾನ ಮಾಡಲಿರುವರು.


ಮುಖ್ಯ ಅತಿಥಿಗಳಾಗಿ ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕರಾಜು, ಜಾನಪದ ಪರಿಷತ್ತು ಬೆಂಗಳೂರು ಕಾರ‍್ಯಾಧ್ಯಕ್ಷ ಪ್ರೊ ಬೋರಲಿಂಗಯ್ಯ, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಕು|| ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್ ಕೆ.,  ಮಂಜುನಾಥ ಭಂಡಾರಿ, ಬಿ.ಎಂ. ಫಾರೂಕ್,  ಎಸ್.ಎಲ್. ಬೋಜೆ ಗೌಡ, ಕೆ. ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ‍್ಯದರ್ಶಿ ಇನಾಯತ್ ಆಲಿ, ವಿಶ್ವ ಹಿಂದೂ ಪರಿಷತ್ ರಾಜ್ಯ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್, ವಿರೋಧ ಪಕ್ಷದ ನಾಯಕರಾದ ಪ್ರವೀಣ್ ಚಂದ್ರ ಆಳ್ವ ಉಪಸ್ಥಿತರಿರುವರು.


ವಿಶೇಷವಾಗಿ ಈ ಸಂದರ್ಭದಲ್ಲಿ ಅಯೋಧ್ಯೆ ಶ್ರೀ ರಾಮ ವಿಗ್ರಹ ಶಿಲ್ಪಿ "ಅರುಣ್ ಯೋಗಿರಾಜ್" ಅವರಿಗೆ "ಅಮರ ಶಿಲ್ಪಿ" ಬಿರುದು ಪ್ರದಾನ ಮಾಡಲಿರುವರು. ಸಂಜೆ 7:30 ರಿಂದ ಮಣಿಕಾಂತ್ ಕದ್ರಿ ಬಳಗದವರಿಂದ ಮ್ಯೂಸಿಕಲ್ ನೈಟ್ ಕಾರ‍್ಯಕ್ರಮ ನಡಯಲಿರುವುದು. ವಿಶೇಷ ಆಹ್ವಾನಿತರಾಗಿ ಹಿರಿಯ ಚಲನಚಿತ್ರ ನಟ, ನಾಟಕ ಕಲಾವಿದರಾದ ವಿಜಯ ಕುಮಾರ್ ಕೊಡಿಯಾಲ್‌ಬೈಲ್, ನವೀನ್ ಡಿ ಪಡೀಲ್, ಡಾ. ದೇವದಾಸ್ ಕಾಪಿಕಾಡ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಪ್ರಕಾಶ್ ಪಾಂಡೇಶ್ವರ, ಕಿಶೋರ್ ಡಿ. ಶೆಟ್ಟಿ, ಸ್ವರಾಜ್ ಶೆಟ್ಟಿ, ಮೋಹನ್ ಕೊಪ್ಪಳ, ಸಾಯಿಕೃಷ್ಣ, ತಿಲಕ್‌ರಾಜ್, ಭರತ್‌ರಾಜ್ ಕೃಷ್ಣಾಪುರ ಮೊದಲಾದ ಗಣ್ಯರು ಉಪಸ್ಥಿತರಿರುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top