ಮಾ.1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ನಿಷೇಧಾಜ್ಞೆ ಜಾರಿ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.



ಈ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.


ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ. ವಿಷಯಗಳನ್ನು ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 


ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯ ವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top