ಡಾ.ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿ ಸಮಾವೇಶ

Upayuktha
0



ಕುಂದಾಪುರ :"ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಯಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆ ಎಂದು  ಉಡುಪಿ ಎಂಜಿಎಂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು. 


ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಮೊದಲ ಸಮ್ಮಿಲನ ಸಮಾವೇಶ ಉದ್ಘಾಟಿಸಿ ಮಾತನಾಡಿದರು.



ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ವಹಿಸಿ ಕಾಲೇಜು ತನ್ನ ಹದಿನಾಲ್ಕು ವರುಷಗಳಲ್ಲಿ ನಡೆದು ಬಂದ ಹಾದಿಯನ್ನು  ನೆನಪಿಸಿಕೊಂಡು ಕಾಲೇಜಿನ  ಸಾಧನೆಯನ್ನು  ವಿವರಿಸಿ  ಹಳೆ ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.ಕಾಲೇಜಿನ ಉಪ ಪ್ರಾಂಶುಪಾಲ ಡಾ.ಚೇತನಕುಮಾರ್ ಶೆಟ್ಟಿ  ಕೆ.ಪ್ರಾಸ್ತಾವಿಕ ಮಾತನಾಡಿದರು.



ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್ ಸ್ವಾಗತಿಸಿ ಕೇೂಶಾಧಿಕಾರಿ ಯೊಗೀಶ ಶ್ಯಾನುಬೇೂಗ ವಂದಿಸಿದರು. ಕಾರ್ಯದಶಿ೯ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಅನಂತರದಲ್ಲಿ ಹಳೆ  ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top