ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಕಾರ್ಯಾಗಾರ ಆತಂಕದ ವಿಷಯ: ನಳಿನ್ ಕುಮಾರ್ ಕಟೀಲ್

Upayuktha
0


ಮಂಗಳೂರು: ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು  ಕಾರ್ಯಾಗಾರ ನಡೆಸುವುದಾಗಿ ರಾಜ್ಯ ಬಜೆಟ್‌ನಲ್ಲಿ ತಿಳಿಸಲಾಗಿದೆ. ಇದರ ಉದ್ದೇಶ ಏನು? ಕಾರ್ಯಾಗಾರ ನಡೆಸುವವರು ಯಾರು? ಎನ್ನುವ ಆತಂಕ ಸಹಜವಾಗಿಯೇ ಜನರಲ್ಲಿ ಮೂಡಿದೆ ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ


ಬಜೆಟ್ ಭಾಷಣದಲ್ಲಿ ಸಾಮಾನ್ಯವಾಗಿ ಅರ್ಥಿಕ ಸಂಪನ್ಮೂಲ ಕ್ರೋಡೀಕರಣ ಮತ್ತು ಅಭಿವೃದ್ದಿ ಯೋಜನೆಗಳಿಗೆ ಹಣ ಹಂಚಿಕೆ ಬಗ್ಗೆ ರಾಜ್ಯದ ಜನತೆಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಆದರೆ ಸಿದ್ದರಾಮಯ್ಯ ಅವರು ರಾಜಕೀಯ ದ್ವೇಷದ ಭಾಷಣ ಮಾಡುವ ಕೆಟ್ಟ ಸಂಪ್ರದಾಯವನ್ನು ಈ ಬಜೆಟ್‌ನಲ್ಲೂ ಮುಂದುವರಿಸಿದ್ದಾರೆ ಎಂದು ಅವರು ಟೀಕಿಸಿದರು.


ಕೇಂದ್ರ ಸರ್ಕಾರವನ್ನು ದೂಷಿಸಲು ಸೀಮಿತವಾದ ಈ ಬಜೆಟ್ ಯುಪಿಎ ಸರ್ಕಾರವನ್ನು ಹೊಗಳುವುದರ ಜತೆಗೆ ಭಾರತ್ ಜೋಡೋ ಯಾತ್ರೆಯನ್ನೂ ಉಲ್ಲೇಖಿಸಿರುವುದು ನಾಚಿಕೆಗೇಡಿನ ವಿಚಾರ. ಚುನಾವಣೆ ಸಂದರ್ಭ ಕರಾವಳಿಗೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಿ 2,500 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಬಜೆಟ್‌ನಲ್ಲಿ ಕರಾವಳಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿೃಸಿದೆ ಎಂದು ಸಂಸದರು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top