ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಶುಕ್ರವಾರ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ಜಾಗೃತಿ ಸಮಾವೇಶಕ್ಕೆ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಲ್ಲದೇ, ಎನ್‌ಸಿಸಿ ಭೂದಳ ಮತ್ತು ನೌಕಾದಳದ ವಿದ್ಯಾರ್ಥಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ರಾಜ್ಯ ಸರ್ಕಾರವು ಸಂವಿಧಾನದ ಮಹತ್ವ ಹಾಗೂ ಅದರ ನಿರಂತರ ಮೌಲ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ 26ನೇ ಜನವರಿ 2024 ರಿಂದ 23ನೇ ಫೆಬ್ರವರಿ 2024ರವರೆಗೆ ನಿರಂತರವಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ೨೩ರಂದು ಈ ಅಭಿಯಾನದ ಸಮಾರೋಪ ಸಮಾರಂಭದ ಭಾಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನಗರದ ವಿವಿಧ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ