ಮಂಗಳೂರು: ಜಿಲ್ಲಾ ಗೃಹರಕ್ಷಕ ದಳದಲ್ಲಿ ಮೂಲ ತರಬೇತಿ ಶಿಬಿರ

Upayuktha
0



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮುಂಬರುವ ಚುನಾವಣಾ  ಸಂಬಂಧ ಕೇಂದ್ರ ಕಛೇರಿಯ ಮಂಜೂರಾತಿಯಂತೆ ದಿನಾಂಕ: 01-03-2024 ರಿಂದ 10-03-2024 ರವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಮೂಲ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. 


10 ದಿನಗಳ ಅವಧಿಯಲ್ಲಿ ನಡೆಯುವ ತರಬೇತಿಯಲ್ಲಿ 55 ಗೃಹರಕ್ಷಕರಿಗೆ ವಿವಿಧ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಂದ ರೈಫಲ್ ತರಬೇತಿ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ ತರಬೇತಿ, ಲಾಠಿ ಡ್ರಿಲ್, ನಿಸ್ತಂತು ತರಬೇತಿ, ವಿಪತ್ತು ನಿಯಂತ್ರಣ ತರಬೇತಿ, ಸಂಚಾರ ನಿಯಂತ್ರಣ ಮುಂತಾದ ತರಬೇತಿಗಳನ್ನು ನೀಡಲಾಗುವುದು. ದಿನಾಂಕ : 01-03-2024 ರಂದು ಮಧ್ಯಾಹ್ನ  12:00 ಗಂಟೆಗೆ ತರಬೇತಿ ಶಿಬಿರದ ಉದ್ಘಾಟನೆಯನ್ನು ಪೊಲೀಸ್ ಉಪ ಆಯುಕ್ತರಾದ ಶ್ರೀ ಬಿ.ಪಿ. ದಿನೇಶ್ ಕುಮಾರ್ ಅವರು ಮಾಡಲಿದ್ದಾರೆ. ಈ ತರಬೇತಿಯು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಇವರ ನೇತೃತ್ವದಲ್ಲಿ ನಡೆಯಲಿದೆ ಎಂಬುದಾಗಿ ಗೃಹರಕ್ಷಕದಳದ  ಪ್ರಕಟಣೆಯಲ್ಲಿ ತಿಳಿಸಲಾಗಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top