ಮಂಗಳೂರು: ರವಿವಾರದಂದು ಕ ಸಾ ಪ ಇದರ ರಾಜ್ಯ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಷಿಯವರು ಖ್ಯಾತ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರ ಮಂಗಳೂರಿನ ಕದ್ರಿಯ ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು. ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಬಗ್ಗೆ ಮತ್ತು ಜನರ ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ ಅನ್ನು ಹೇಗೆ ತಲುಪಬಹುದು ಎಂಬ ವಿಚಾರದ ಬಗ್ಗೆ ಗಹನವಾದ ಚರ್ಚೆ ನಡೆಸಿದರು.
ಈ ಸಂಧರ್ಭ ದಲ್ಲಿ ಕಸಾಪ ಇದರ ಕೇಂದ್ರೀಯ ಮಾರ್ಗದರ್ಶಿ ಸಮಿತಿ ಸದಸ್ಯರಾದ ಡಾ ಮುರಲಿ ಮೋಹನ್ ಚೂಂತಾರು ಮತ್ತು ಕ ಸಾ ಪ ಮಂಗಳೂರು ಇದರ ಅಧ್ಯಕ್ಷರಾದ ಮಂಜುನಾಥ ರೇವಣ್ಕರ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ