ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ ಫೆಬ್ರವರಿ ತಿಂಗಳ ಗೌರವ ಅತಿಥಿಯಾಗಿ ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ಭಾಗವಹಿಸಲಿದ್ದಾರೆ. ನಾಳೆ ಬೆಳಗ್ಗೆ (ಫೆ.21) 11:30ಕ್ಕೆ ಮಂಗಳೂರು ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ನಮ್ಮ ಟಿ.ವಿ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ