ಮಂಗಳೂರು: ಸರಳ ಸಂವಹನಕ್ಕಾಗಿ ಮಾತೃಭಾಷೆ ಅತಿ ಅಗತ್ಯ. ಆದ್ದರಿಂದ ವಿವಿಧ ಪ್ರಾಂತ್ಯದ ಜನರು ತಮ್ಮದೇ ಮಾತೃಭಾಷೆ ಅನುಸರಿಸುತ್ತಾರೆ. ಇದು ವಿಶ್ವಸಂಸ್ಥೆಯಿಂದ ನಮಗೆ ದೊರಕಿದ ಬಹುದೊಡ್ಡ ಕೊಡುಗೆಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಷ್ಟ್ರೀಯ ಮಾತೃಭಾಷೆ ದಿನದ ಅಂಗವಾಗಿ ನಡೆದ ಪುಸ್ತಕ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ವಿಭಜನೆ ನಂತರ ಬಾಂಗ್ಲಾದೇಶ ಉರ್ದು ಭಾಷೆಯನ್ನು ಅಧಿಕೃತವಾಗಿ ಗುರುತಿಸಿ ಘೋಷಿಸಬೇಕೆಂದು ವಿದ್ಯಾರ್ಥಿಗಳು ಹೋರಾಟ ನಡೆಸಿದರು. ಈ ಚಳವಳಿಯಲ್ಲಿ ಪ್ರಾಣತೆತ್ತ ವಿದ್ಯಾರ್ಥಿಗಳ ನೆನಪಿಗಾಗಿ ಫೆ. 21ರಂದು ರಾಷ್ಟ್ರೀಯ ಮಾತೃಭಾಷೆ ದಿವಸ ಎಂದು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡ, ತುಳು, ಹಿಂದಿ, ಕೊಂಕಣಿ ಭಾಷೆಗಳ ಪ್ರಾಮುಖ್ಯತೆ ಕುರಿತು ವಿದ್ಯಾರ್ಥಿಗಳು ಮಾಹಿತಿ ನೀಡಿದರು. ವಿವಿಧ ವಿಭಾಗದ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಉಪಸಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ