ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್. ಇಡಿ) ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಕೆ ಮಾತನಾಡುತ್ತಾ, ನಮ್ಮ ದೇಶದ ಅಭಿವೃದ್ಧಿಗೆ ಅಡಿಪಾಯವಾಗಿರುವ ನಮ್ಮ ವಿಜ್ಞಾನಿಗಳ ಅದ್ಭುತ ಸಾಧನೆಗಳನ್ನು ಸ್ಮರಿಸುತ್ತಾ ಯುವಜನರಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ತೇಜಿಸಬೇಕು ಮತ್ತು ವಿದ್ಯಾರ್ಥಿಗಳು ಕುತೂಹಲದಿಂದ ವಿಜ್ಞಾನದ ಪ್ರಯೋಗಗಳು ಹಾಗೂ ಮಾದರಿಗಳನ್ನು ತಯಾರಿಸುವ ಬಗ್ಗೆ ಪ್ರೇರಣೆ ನೀಡಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ.ಎ. ವಹಿಸಿ ಮಾತನಾಡುತ್ತಾ, ರಾಮನ್ ಪರಿಣಾಮದ ಆವಿಷ್ಕಾರವನ್ನು ಸ್ಮರಿಸುವ ರಾಷ್ಟ್ರೀಯ ಆಚರಣೆಯು ನಮ್ಮ ರಾಷ್ಟ್ರದ ವೈಜ್ಞಾನಿಕ ಸಮುದಾಯವನ್ನು ಗೌರವಿಸುವಂತಿದೆ ಹಾಗೂ ವೈಜ್ಞಾನಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸ್ಥಳೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಪ್ರಶಿಕ್ಷಣಾರ್ಥಿಗಳಾದ ಅಂಬಿಕಾ ಹಾಗೂ ಯತೀಕ್ಷಾ ರಾಷ್ಟ್ರೀಯ ವಿಜ್ಞಾನ ದಿನದ ಕುರಿತು ಮಾತನಾಡಿದರು. ಉಪನ್ಯಾಸಕರಾದ ಮಂಜು ಆರ್, ಅನುಷಾ ಡಿ.ಜೆ. ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು. ಪ್ರಶಿಕ್ಷಣಾರ್ಥಿಗಳಾದ ಪ್ರತೀಕ್ಷಾ ಹಾಗೂ ದಿವ್ಯ ಪ್ರಾರ್ಥಿಸಿ, ಜಯಶ್ರೀ ಸ್ವಾಗತಿಸಿ, ಚಿತ್ರಲೇಖ ವಂದಿಸಿ, ಶಮೀಮ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ