ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮೂಡುಬಿದಿರೆಯ ಸಹಕಾರಿ ಸೇವಾ ಸಂಘ ಸಹಯೋಗದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾಮಂದಿರ ಬಳಿ ಫೆ. 10ರಂದು ಶನಿವಾರ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ಗಂಟೆಯ ವರೆಗೆ ಸ್ಥೂಲಕಾಯ ಮಾಹಿತಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ತಜ್ಞ ವೈದ್ಯಕೀಯ ವೃತ್ತಿಪರರಿಂದ ಸಮಗ್ರ ಮೌಲ್ಯಮಾಪನ, ತಜ್ಞರೊಂದಿಗೆ ಸಮಾಲೋಚನೆ, ಸ್ಥೂಲಕಾಯ ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ತಿಳಿವಳಿಕೆ ಮತ್ತು ಪರಿಣಿತರೊಂದಿಗೆ ಸಂವಾದಾತ್ಮಕ ಪ್ರಶ್ನೋತ್ತರ ಶಿಬಿರ ಇದಾಗಿದೆ.
ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಮೂಡುಬಿದಿರೆಯ ಸಹಕಾರಿ ಸೇವಾ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು (ಮೊ. 9742473545) ಸಂಪರ್ಕಿಸಬಹುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ