ಅಯೋಧ್ಯಾ ರಾಮನಿಗೆ ಸ್ವರ್ಣ ಅಟ್ಟೆ ಪ್ರಭಾವಳಿ ಪೇಜಾವರ ಶ್ರೀಗಳ ಮೂಲಕ ಅರ್ಪಣೆ

Upayuktha
0


ಅಯೋಧ್ಯೆ:
ಅಯೋಧ್ಯಾ ರಾಮನಿಗೆ ಶ್ರೀಸಂಸ್ಥಾನ‌ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ಮತ್ತು ಭಕ್ತರಿಂದ ಅರ್ಪಿಸಲಾದ ಸುಮಾರು 70 ಲಕ್ಷ ರೂ ಮೌಲ್ಯದ ಸ್ವರ್ಣ ಅಟ್ಟೆ ಪ್ರಭಾವಳಿಯನ್ನು ಇಂದು ಅಯೋಧ್ಯೆಯಲ್ಲಿ  ಪೇಜಾವರ ಶ್ರೀಗಳ ಮೂಲಕ ಅರ್ಪಿಸಲಾಯಿತು.



ವಿ. ಹಿಂ. ಪ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲ್ ಜಿ . ಶಾಸಕ ವೇದವ್ಯಾಸ ಕಾಮತ್, ಪ್ರಮುಖರಾದ  ರಾಘವೇಂದ್ರ ಕುಡ್ವ , ಸುರೇಂದ್ರ  ನಾಯಕ್ ಮಾಜಿ ಶಾಸಕ ಕೆ ರಘುಪತಿ ಭಟ್ ಮಹೇಶ್ ಠಾಕೂರ್, ಸುವರ್ಧನ್, ಮೊದಲಾದವರು ಉಪಸ್ಥಿತರಿದ್ದರು. 



ಈ ಸಂದರ್ಭ ಶ್ರೀಗಳು ಸಂದೇಶ ನೀಡಿ ಕಾಶಿ ಮಠಾಧೀಶರು ಬೆಳ್ಳಿ ಪಲ್ಲಕ್ಕಿ ಮತ್ತು ಸ್ವರ್ಣ ಪ್ರಭಾವಳಿಯನ್ನು ರಾಮನಿಗೆ ಅರ್ಪಣೆ ಮಾಡುವ ಮೂಲಕ  ಸ್ವರ್ಣಾಕ್ಷರದಲ್ಲಿ ಬರೆದಿಡುವಂಥ ಕಾರ್ಯ ಮಾಡಿರುವುದು ಅತ್ಯಂತ ಶ್ಲಾಘನೀಯ. ರಾಮಮಂದಿರ ನಿರ್ಮಾಣವಾಗಿದೆ. ಇನ್ನು ರಾಮರಾಜ್ಯ ನಿರ್ಮಾಣಕ್ಕೆ ನಾವೆಲ್ಲ ಒತ್ತು ಕೊಟ್ಡು ಕಾರ್ಯ ನಿರ್ಮಿಸಬೇಕಾಗಿದೆ. ರಾಮಭಕ್ತಿ ರಾಷ್ಟ್ರಭಕ್ತಿಯ ಸಮನ್ವಯವಾದಾಗ ಇಡೀ ದೇಶ ಸುಭಕ್ಷೆ ಸಮೃದ್ಧಿ  ಶಾಂತಿ ನೆಮ್ಮದಿಯನ್ನು ಕಾಣಲು ಸಾಧ್ಯ. ಅದಕ್ಕಾಗಿ ಎಲ್ಲರೂ ಶ್ರಮಿಸೋಣ ಎಂದರು. 



ಶನಿವಾರದಂದು ಬೆಂಗಳೂರಿನ ಪ್ರಸಿದ್ಧ ಉದ್ಯಮಿ ಮಾಜಿ ವಿಧಾನ‌ಪರಿಷತ್ ಸದಸ್ಯ ದಯಾನಂದ ರೆಡ್ಡಿ, ಮಂಗಳೂರಿನ ರಾಮಚಂದ್ರ ಕುಡ್ವರಿಂದ ರಾಮದೇವರಿಗೆ ರಜತ ಕಲಶಾಭಿಷೇಕ ಸೇವೆ ನೆರವೇರಿತು. ಶನಿವಾರವೂ ಅಯೋಧ್ಯೆಯಲ್ಲಿ ಜನಸಾಗರವೇ ಹರಿದು ಬರುತ್ತಿದ್ದು ನಾಲ್ಕು ಲಕ್ಷಕ್ಕೂ ಅಧಿಕ ಭಕ್ತರು ರಾಮದರ್ಶನ ಪಡೆದರು. ಸ್ವರ್ಣ ಪ್ರಭಾವಳಿಯನ್ನು ಕೇವಲ ಏಳು ದಿನಗಳಲ್ಲಿ  ಉಡುಪಿಯ ಪ್ರಸಿದ್ದ ಸ್ವರ್ಣ ಜ್ಯುವೆಲ್ಲರ್ಸ್ ನವರು ನಿರ್ಮಿಸಿದ್ದು ಸಂಸ್ಥೆಯ ಪಾಲುದಾರರಾದ ಗುಜ್ಜಾಡಿ ರಾಮದಾಸ ನಾಯಕ್ ರೊಂದಿಗೆ  ಶ್ರೀಗಳು ದೂರವಾಣಿ ಮೂಲಕ ಮಾತನಾಡಿ ಅಭಿನಂದಿಸಿ ರಾಮನ  ವಿಶೇಷ ಅನುಗ್ರಹವನ್ನು ಪ್ರಾರ್ಥಿಸುವುದಾಗಿ ತಿಳಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top