ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ ನಲ್ಲಿ ಖಾಯಂ ಉದ್ಯೋಗ: ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ

Upayuktha
0



ಮಂಗಳೂರು: ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ  ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ  ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಲಾಯಿತು. 



ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಶೀಘ್ರದಲ್ಲಿಯೇ ಸಕರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕರಾದ  ಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕರಾದ  ರಾಜೇಶ್ ನಾಯ್ಕ್ ರವರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top