ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಜನಪರ ಕಾರ್ಯಕ್ರಮಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯ, ಈ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಭಾರತದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಪ್ರಬಂಧಕ ಉದಯಕುಮಾರ್ ಹೇಳಿದರು.
ಅವರು ಇಂದು ಕಂಕನಾಡಿಯ ಸ್ಟೇಟ್ ಬ್ಯಾಂಕ್ ಆವರಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನ (ನಗರ) ಆಗಮಿಸಿದಾಗ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಶನ್ ನ ಅಧಿಕಾರಿ ಜಿ.ತುಕಾರಾಮ ಗೌಡ ಕಾರ್ಯಕ್ರಮದ ಉದ್ದೇಶ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಶೆಟ್ಟಿ, ಕಂಕನಾಡಿ ಎಸ್ ಬಿ ಐ ಮ್ಯಾನೇಜರ್ ನಾಗಸುಬ್ಬರೆಡ್ಡಿ, ರೋಶನಿ ನಿಲಯದ ಎನ್ಎಸ್ಎಸ್ ಅಧಿಕಾರಿ ಓಬನಾಥ್,ಎಸ್ ಬಿ ಐ ನ ಲತಾ ಭಾಗವಹಿಸಿದ್ದರು. ಎಸ್ ಬಿ ಐ ಪ್ರಾದೇಶಿಕ ಕಚೇರಿಯ ಅಧಿಕಾರಿ ನಾಗೇಶ್, ವಿಕಸಿತ ಭಾರತ ಸಂಕಲ್ಪ ಪ್ರತಿಜ್ಞೆಯನ್ನು ಬೋಧಿಸಿದರು. ಫೈನಾನ್ಸಿಯಲ್ ಲಿಟರಸಿ ಕೌನ್ಸಿಲರ್ ಲತೇಶ್ ಬಿ ಸಂಪನ್ಮೂಲ ವ್ಯಕ್ತಿಯಾಗಿ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಅಂಚೆ ಇಲಾಖೆ, ಆಧಾರ್ ಸೇವಾ ಕೇಂದ್ರ ಹಾಗೂ ಗ್ಯಾಸ್ ಏಜೆನ್ಸಿಗಳ ಅಧಿಕಾರಿಗಳು ವಿವಿಧ ಯೋಜನೆಗಳ ಫಲಾನುಭವಿಗಳು, ಎನ್ ಎಸ್ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಫಲಾನುಭವಿಗಳು ಅನುಭವ ಹಂಚಿಕೊಂಡರು. ಅರ್ಹ ಫಲಾನುಭವಿಗಳಿಗೆ ಆದೇಶಪತ್ರ ಹಾಗೂ ಚೆಕ್ ವಿತರಿಸಲಾಯಿತು. ವಿವಿಧ ಯೋಜನೆಗಳ ಕುರಿತ ವಿಡಿಯೋ ಪ್ರದರ್ಶನ ನಡೆಯಿತು. ಎಸ್ ಬಿ ಐ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ನೆರಳಿಗಾಗಿ ಕೊಡೆಗಳನ್ನು ವಿತರಿಸಲಾಯಿತು. ಲತೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ