ಪುತ್ತೂರು: ಮತದಾನ ಮಾಡುವುದು ಎಲ್ಲರ ಕರ್ತವ್ಯ. ಯಾವುದೇ ಆಸೆ,ಆಮಿಷಗಳಿಗೆ ಬಲಿಯಾಗದೆ ಸ್ವ ಇಚ್ಛೆಯಿಂದ ಮತದಾನ ಮಾಡುವುದು ಮುಖ್ಯ. ವಿದ್ಯಾರ್ಥಿಗಳಾದವರು ಸಂವಿಧಾನದ ಮೌಲ್ಯವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಪುತ್ತೂರು ವಿಭಾಗದ ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇವರು ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಪುತ್ತೂರು ಇಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ.ಸಿ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞಾ ವಿಧಿ ನಡೆಸಿಕೊಟ್ಟರು.
ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಾಯಿತು.
ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧ ಚಿತ್ರವನ್ನು ಹೊಂದಿರುವ ರಥವನ್ನು ಬ್ಯಾಂಡ್ ಪಾರ್ಟಿ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳ ಪಥ ಸಂಚಲನದೊAದಿಗೆ ಕಾಲೇಜಿನ ಆವರಣದತ್ತ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಪುತ್ತೂರಿನ ತಹಶೀಲ್ದಾರ್ ಪುರಂದರ ಹೆಗ್ಡೆ, ಸಂತ ಫಿಲೋಮಿನಾ ಕಾಲೇಜು ಪುತ್ತೂರಿನ ಪ್ರಾಂಶುಪಾಲ ಡಾ. ಆಂಟೋನಿ ಪ್ರಕಾಶ್ ಮೊಂತೆರೊ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಯಶಸ್ ಘಟಕದ ವಿದ್ಯಾರ್ಥಿಗಳಿಂದ ಸಂವಿಧಾನದ ರಕ್ಷಣೆ ಮತ್ತು ಕರ್ತವ್ಯದ ಬಗ್ಗೆ ಬೀದಿ ನಾಟಕ, ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ವಿದ್ಯಾರ್ಥಿಗಳಿಂದ ಸಂವಿಧಾನದ ಆಶಯವನ್ನು ನೃತ್ಯದ ಮೂಲಕ ತೋರಿಸಿದರು. ಅಂಬೇಡ್ಕರ್ ಅವರ ತತ್ವ ಆದರ್ಶಗಳ ಬಗ್ಗೆ ಸಂತ ಫಿಲೋಮಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಸ್ವಾಗತಿಸಿ,ರೋವರ್ ಸಂಯೋಜಕ ಡಾ. ಈಶ್ವರ ಪ್ರಸಾದ್ ಕೆ ಎಸ್ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)





