ಪುತ್ತೂರು: ಶಿಕ್ಷಣವು ಒಬ್ಬ ವ್ಯಕ್ತಿಯ ಚಾರಿತ್ಯ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಬೇಕು. ಕೇವಲ ಪರೀಕ್ಷೆ ಬರೆಯಲು ಮಾತ್ರ ಸೀಮಿತವಾಗದೆ ಉತ್ತಮ ನಾಗರಿಕರನ್ನಾಗಿ ಮಾಡಬೇಕು. ಇಂದಿನ ಭಾರತದ ಭವಿಷ್ಯ ಯುವಜನತೆಯ ಕೈಯಲ್ಲಿದೆ. ಮೊದಲು ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು ಜವಬ್ದಾರಿ ಯನ್ನು ನಿಭಾಯಿಸಲು ಕಲಿಯಬೇಕು. ಸ್ವಾಮಿ ವಿವೇಕಾನಂದರ ಆದರ್ಶ ಜೀವನ, ಧ್ಯೇಯ, ಸಾಧನೆ, ಇವುಗಳನ್ನು ಇಂದಿನ ಯುವ ಜನತೆ ಅರಿತು ಕೊಳ್ಳಬೇಕಾದದ್ದು ಅವಶ್ಯಕವಾಗಿದೆ.ಅವರೊಬ್ಬ ರಾಷ್ಟ್ರ ಭಕ್ತ ಸಂತ. ಸ್ವಾಮಿ ವಿವೇಕಾನಂದರು ತಮ್ಮ ಚಿಂತನೆಯಲ್ಲಿ ನಮ್ಮ ಭಾರತ ಹೇಗಿರಬೇಕು ಅಂದುಕೊಂಡಿದ್ದರು,ಅಂತಹ ಭಾರತ ಕಟ್ಟುವುದು ಯುವಜನರ ಕರ್ತವ್ಯವಾಗಿದೆ ಎಂದು ಶ್ರೀ ರಾಮಕೃಷ್ಣ ಮಠ ಮಂಗಳೂರು ಇದರ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ, ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ನಡೆದ ವಿವೇಕಾನಂದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ದಶಮಾನೋತ್ಸವ ಆಚರಣೆಯ ಪ್ರಯುಕ್ತ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಸಂಚಾಲಕ ಮುರಳಿ ಕೃಷ್ಣ ಕೆಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂಸ್ಕೃತಿಯನ್ನು ಅನುಷ್ಠಾನಗೊಳಿಸಿದವರಲ್ಲಿ ಪ್ರಮುಖರು ಸ್ವಾಮಿ ವಿವೇಕಾನಂದರು. ಒಬ್ಬ ವ್ಯಕ್ತಿ ಅವನ ವಯಕ್ತಿಕ ಜೀವನ ಕಟ್ಟಿಕೊಳ್ಳಲು ಹೊರಟಾಗ ಆಧ್ಯಾತ್ಮಿಕತೆ ನೆರವಾಗುತ್ತದೆ. ಈಗಿನ ಕಾಲ ಪರಿವರ್ತನೆಯ ಕಾಲ ಹಾಗಾಗಿ ವಿದ್ಯಾರ್ಥಿಗಳು ವಿವೇಕಾನಂದ ತತ್ವಗಳನ್ನು ಜೀವನದಲ್ಲಿ ಅಳವಡಿಸಿ ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು
ವೇದಿಕೆಯಲ್ಲಿ ಕಾಲೇಜಿನ ವಿಶೇಷ ಅಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಮತ್ತು ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಶ್ರೀಧರ್ ಹೆಚ್ ಜಿ ಸ್ವಾಗತಿಸಿ, ಸ್ನಾತಕೋತರ ವಿಭಾಗದ ಡೀನ್ ಮತ್ತು ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯ ಸರಸ್ವತಿ ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕ ಮಧುಕುಮಾರ್ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







