ಬೆಂಗಳೂರು: ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಜಗ್ಗೇಶ್ ಸೋಷಿಯಲ್ ಮೀಡಿಯಾ ಮೂಲಕ ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಕೆಲವು ಮಾಧ್ಯಮಗಳಲ್ಲಿ ಅವರ ಹೆಸರಿನಲ್ಲಿ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇದೀಗ ಜಗ್ಗೇಶ್ ಅವರು ತಮ್ಮ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಟೀಕೆ ಮಾಡುವವರಿಗೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.
ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ