ಸಾಗರ: ಬಜರಂಗ ದಳದ ವತಿಯಿಂದ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

Upayuktha
0


ಸಾಗರ: ರಾಜ್ಯಸಭಾ ಚುನಾವಣೆ ವಿಜಯೋತ್ಸವ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ವಿರುದ್ದ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳದ ವತಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ, ಕರ್ನಾಟಕದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲಿ ರಾಜ್ಯಸಭಾ ನೂತನ ಸದಸ್ಯ ನಾಸೀರ್ ಹುಸೇನ್ ವಿಜಯೋತ್ಸವ ಸಂದರ್ಭದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಯಾವ ಸ್ಥಳದಲ್ಲಿ ಭಾರತ್ ಮಾತಾಕೀ ಜೈ ಎನ್ನಬೇಕಾಗಿತ್ತೋ ಅಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎನ್ನುವ ಘೋಷಣೆ ಕೂಗಿರುವುದು ನೀಚಮನಸ್ಥಿತಿಗೆ ಸಾಕ್ಷಿಯಾಗಿದೆ. ಇಂತಹದ್ದನ್ನು ಕಾಂಗ್ರೇಸ್ ಪಕ್ಷ ಸಮರ್ಥಿಸಿಕೊಂಡಿರು ವುದು ದುರದೃಷ್ಟಕರ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾಸೀರ್ ಹುಸೇನ್ ಸದಸ್ಯತ್ವವನ್ನು ತಕ್ಷಣ ರದ್ದುಮಾಡಬೇಕು ಎಂದು ಒತ್ತಾಯಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top