ಮಲ್ಪೆ : ಹಳೆ ವಿದ್ಯಾರ್ಥಿ ಸಂಘ (ರಿ) ಸರ್ಕಾರಿ ಪದವಿ ಪೂರ್ವ ಕಾಲೇಜು, (ಮೀನುಗಾರಿಕಾ ) ಮಲ್ಪೆ ಇದರ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎಂಬ ವಿಷಯದ ಕುರಿತು ಕಾರ್ಯಗಾರ ಫೆಬ್ರವರಿ 7ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಪಾಲ್ ಸಿ ಬಂಗೇರ ಉದ್ಘಾಟಿಸಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಆತಂಕವನ್ನು ದೂರ ಮಾಡುವ ಉದ್ದೇಶದಿಂದ ಈ ತರ ವೇದಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇದರ ಪೂರ್ಣ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.
ಕಾಲೇಜ್ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸದಾನಂದ ಸಾಲಿಯನ್ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಸಾಲ್ಯಾನ್ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ವರ್ಗಿಸ್ ಟಿ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕರ್ಕೇರ ವoದಿಸಿದರು. ಕರುಣಾಕರ ಬಂಗೇರ ನಿರೂಪಿಸಿದರು ಸಂಪನ್ಮೂಲ ವ್ಯಕ್ತಿಯಾಗಿ ಜೆಸಿ ತರಬೇತುದಾರ ರಾಘವೇಂದ್ರ ಪ್ರಭು, ಕರ್ವಾಲು ಭಾಗವಹಿಸಿ ತರಬೇತಿ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ