ಅಂಗನವಾಡಿ ಶಿಕ್ಷಕರಿಗೆ ಒತ್ತಡ ನಿರ್ವಹಣೆ ತರಬೇತಿ ಅತ್ಯಗತ್ಯ : ಚಂದ್ರಪ್ಪ

Upayuktha
0




ಶಿವಮೊಗ್ಗ: ಶಿವಮೊಗ್ಗದ ಮನಸ್ಫೂರ್ತಿ ಕಲಿಕಾ ಕೇಂದ್ರ, ಬೆಂಗಳೂರಿನ ಈಶಾನ್ಯ ಇಂಡಿಯಾ ಫೌಂಡೇಶನ್, ನಮ್ಮ ಹಳ್ಳಿ ಥಿಯೇಟರ್(ರಿ), ಶಿವಮೊಗ್ಗ ಇವರ ಸಹಯೋಗದೊಂದಿಗೆ ಜಿಲ್ಲೆಯ ಅಂಗನವಾಡಿ ಶಿಕ್ಷಕರಿಗೆ ಹಾಗೂ ಪರಿವೀಕ್ಷಕರಿಗೆ ಮನಸ್ಫೂರ್ತಿ ಕಲಿಕಾ ಕೇಂದ್ರದಲ್ಲಿ "ಬೌದ್ಧಿಕ ಮತ್ತು ಬೆಳವಣಿಗೆಯ ಹಂತಗಳು, ವಿಕಲತೆ" ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ.ಎ.ಪೈ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕಲಿಕಾ ನ್ಯೂನತೆಯನ್ನು ಹೊಂದಿದ್ದರೂ ಬಹಳ ಪ್ರಯತ್ನದಿಂದ ವೈದ್ಯಕೀಯ ಶಿಕ್ಷಣವನ್ನು ಪಡೆದು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ವ್ಯಕ್ತಿಯನ್ನು ಉದಾಹರಿಸುವ ಮೂಲಕ ಪ್ರೇರಣೆ ನೀಡಿದರು.


ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಪ್ರಭಾರಿ ಅಂಗವಿಕಲ ಯೋಜನಾಧಿಕಾರಿಗಳಾದ ಶ್ರೀ ಚಂದ್ರಪ್ಪ ತಮ್ಮ ಉದ್ಘಾಟನಾ ಭಾಷಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬಹಳ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಾರೆ. ಇವರಿಗೆ ಇಂತಹ ತರಬೇತಿಗಳು ಆಗಾಗ ನಡೆದರೆ ಉತ್ತಮ. ಇಂತಹ ಪ್ರಯತ್ನವನ್ನು ಮನ:ಸ್ಫೂರ್ತಿ ಸಂಸ್ಥೆಯು ಬಹಳ ಹಿಂದಿನಿಂದಲೂ ನಡೆಸುತ್ತಿದೆ ಎಂದು ಶ್ಲಾಘಿಸಿದರು.


ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಮಂಜುನಾಥ ಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಈಶಾನ್ಯ ಫೌಂಡೇಶನ್ ನ ಶ್ರೀ ಮತಿ ಲಕ್ಷ್ಮೀ ಪ್ರಸಾದ್ ಹಾಗೂ ಶಿವಮೊಗ್ಗದ ನಮ್ಮ ಹಳ್ಳಿ ಥಿಯೇಟರ್(ರಿ)ನ ಅಧ್ಯಕ್ಷರಾದ ಚೇತನ್.ಸಿ.ರಾಯನಹಳ್ಳಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಶೇಷ ಮಕ್ಕಳಿಗಾಗಿ ನಡೆಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ಪ್ರೋತ್ಸಾಹಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಮನಸ್ಫೂರ್ತಿ ಕಲಿಕಾ ಕೇಂದ್ರದ ಸಂಯೋಜಕರಾದ ಶ್ರೀಮತಿ ರಂಗನಾಯಕಿ ಸ್ವಾಗತಿಸಿದರು. ಸಂಸ್ಥೆಯ ಶಿಕ್ಷಕಿಯಾದ ಶ್ರೀಮತಿ ಅನುಷಾ ಅರುಣ್ ಕಾರ್ಯಕ್ರಮದ ನಿರೂಪಣೆ ಮಾಡಿದರು ಹಾಗೂ ಕು.ಶಿಲ್ಪ.ಪಿ ವಂದನಾರ್ಪಣೆಯನ್ನು ನೆರವೇರಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top