ಶಿವಮೊಗ್ಗ: ಗೋಪಾಲಗೌಡ ಬಡಾವಣೆಯಲ್ಲಿ ಬೆಳಗ್ಗೆ ಕಾಣಿಸಿಕೊಂಡಿದ್ದ ಕರಡಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಇಲ್ಲಿನ ಡಿವಿಜಿ ಪಾರ್ಕ್ ಮುಂಭಾಗದ ಖಾಲಿ ನಿವೇಶನದಲ್ಲಿ ಕರಡಿ ಇತ್ತು.
ನಾಯಿಗಳು ಓಡಿಸಿಕೊಂಡು ಬಂದಿದ್ದರಿಂದ ಕರಡಿ ಆತಂಕಗೊಂಡಿತ್ತು. ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ತುಕಾರಾಂ ಶೆಟ್ಟಿ ಎಂಬುವವರ ಮೇಲೆ ದಾಳಿ ನಡಸಿತ್ತು. ಡಿವಿಜಿ ಪಾರ್ಕ್ ಎದುರು ನಿವೇಶನದಲ್ಲಿ ಗಿಡಗಳ ಮಧ್ಯೆ ಅವಿತು ಕುಳಿತಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ‘ಆಪರೇಷನ್ ಕರಡಿ’ ಆರಂಭಿಸಿದ್ದರು. ಅರೆವಳಿಕೆ ಮದ್ದು ನೀಡಿ, ಬಲೆ ಹಾಕಿ ಕರಡಿಯನ್ನು ಸೆರೆ ಹಿಡಿಯಲಾಗಿದೆ.
ಎರಡೇ ಗಂಟೆಯಲ್ಲಿ ಕಾರ್ಯಾಚರಣೆ:
ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಕರಡಿ ಇರುವ ಜಾಗದ ಸಮೀಪಕ್ಕೆ ಜನರಾರು ತೆರಳದಂತೆ ನಿರ್ಬಂಧ ವಿಧಿಸಿದರು. ನಿವೇಶನದ ಸುತ್ತಲು ಬಲೆ ಹಾಕಿ, ಕರಡಿ ತಪ್ಪಿಸಿಕೊಳ್ಳದಂತೆ ನೋಡಿಕೊಂಡರು. ಬಳಿಕ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಸೆರೆ ಹಿಡಿದಿದ್ದಾರೆ. ಆಪರೇಷನ್ ಕರಡಿ ಕಾರ್ಯಾಚರಣೆ ವೀಕ್ಷಿಸಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಕರಡಿ ಸೆರೆ ಹಿಡಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಪರವಾಗಿ ಜನರು ಜೈಕಾರದ ಘೋಷಣೆ ಕೂಗಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ