ಸುರತ್ಕಲ್: ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೀರ್ತಿವಂತರಾಗಿ ಬಾಳಬೇಕು ಎಂದು ಪ್ರತಿಷ್ಠಿತ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷರಾದ ಹೆಚ್. ಜಯಚಂದ್ರ ಹತ್ವಾರ್ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಹಿಂದು ವಿದ್ಯಾದಾಯಿನೀ ಸಂಘದ ವತಿಯಿಂದ ಆಯೋಜಿಸಲಾದ ವಿದ್ಯಾರ್ಥಿ ಸನ್ಮಾನ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಗಝಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಮತ್ತು ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಕಲೋತ್ಸವದಲ್ಲಿ ಪ್ರತಿಭಾ ಪ್ರದರ್ಶನಗೈದ ಅನುದಾನಿತ ವಿದ್ಯಾದಾಯಿನೀ ಪ್ರೌಡ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ನೀಹಾರಿಕ ಅವರನ್ನು ಹೆತ್ತವರಾದ ಯಶಸ್ವಿನಿ ದೇರಾಜೆ ಇವರ ಸಮ್ಮುಖದಲ್ಲಿ ಅಭಿನಂದಿಸಿ ಮಾತನಾಡಿದರು.
ವೇದಿಕೆಯಲ್ಲಿ ಹಿಂದು ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಎಚ್ ಶ್ರೀರಂಗ, ಜೊತೆ ಕಾರ್ಯದರ್ಶಿ ಎಂ ಜಿ. ರಾಮಚಂದ್ರ, ಜೊತೆ ಕೋಶಾಧಿಕಾರಿಯಾದ ರಮೇಶ್ ಟಿ.ಎನ್ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ, ಹಾಗೂ ಶಾಲಾ ಸಂಚಾಲಕರಾದ ಸುಧಾಕರ ರಾವ್ ಪೇಜಾವರ್, ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಬಾಲಚಂದ್ರ ಕೆ. ಎಲ್ಲರನ್ನು ಸ್ವಾಗತಿಸಿ, ಹಿರಿಯ ಸಹಶಿಕ್ಷಕಿ ರೇವತಿ ಬಿ ವಂದಿಸಿದರು, ದಿವಸ್ಪತಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು, ಮಕ್ಕಳ ಪೋಷಕರು, ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ