ಪ್ರಭು ಶ್ರೀರಾಮನ ಸೇವಾ ಕಾರ್ಯಕ್ಕಿಂತ ಮಿಗಿಲಾದುದು ಇಲ್ಲ: ಶಾಸಕ ಕಾಮತ್‌

Upayuktha
0

ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿ ಸಮರ್ಪಣೆ



ಅಯೋಧ್ಯೆ: ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನ ಉತ್ಸವ ಮೂರ್ತಿಗೆ ಸಮರ್ಪಿಸಲಾಯಿತು.


ಈ ಸ್ವರ್ಣ ಪೀಠ ಪ್ರಭಾವಳಿಗೆ ಕೋಟದ ಕಾಶಿಮಠದಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ತಮ್ಮ ಅಮೃತ ಹಸ್ತದಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರಿಗೆ ಹಸ್ತಾಂತರಿಸುವ ಮೂಲಕ ಅಯೋಧ್ಯೆಗೆ ಕಳುಹಿಸಲಾಗಿತ್ತು.  


ಮೊನ್ನೆಯಷ್ಟೇ ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ ಬೆಳ್ಳಿಯ ಪಲ್ಲಕ್ಕಿಯೂ ಸಮರ್ಪಣೆಯಾಗಿದ್ದು ಇಲ್ಲಿ ಗಮನಾರ್ಹ.


ಇದು ನನ್ನ ಜೀವನದ ಪರಮ ಪವಿತ್ರ ಭಾಗ್ಯವಾಗಿದ್ದು ಪರಮಪೂಜ್ಯ ಗುರುಗಳ ಹಾಗೂ ಪ್ರಭು ಶ್ರೀರಾಮನ ಸೇವಾ ಕಾರ್ಯಕ್ಕಿಂತ ಮಿಗಿಲಾದುದು ಬೇರಾವುದೂ ಇಲ್ಲವೆಂದು ಶಾಸಕರು ಇದೇ ವೇಳೆ ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top