ಗೋವಿಂದ ದಾಸ ಕಾಲೇಜಿನಲ್ಲಿ ಎರಡು ದಿನಗಳ ದೇಸಿ ಜಗಲಿ ಕಥಾಕಮ್ಮಟ

Upayuktha
0


ಸುರತ್ಕಲ್
: ಸಾಹಿತ್ಯ ಪ್ರಕಾರಗಳಲ್ಲಿ ಕಥೆ ನಿಜವಾದ ಸಾಮಾಜಿಕ ಅಭಿವ್ಯಕ್ತಿಯಾಗಿದೆ. ಸೂಕ್ಷ್ಮವಾಗಿ ಸಮಾಜವನ್ನು ಗಮನಿಸಿದರೆ ನೂರಾರು ಸಣ್ಣಕಥೆಗಳು ಸೃಷ್ಟಿಗೊಳ್ಳಬಹುದು ಎಂದು ಖ್ಯಾತ ಕಥೆಗಾರ ರಮೇಶ್ ಭಟ್ ಬೆಳಗೋಡು ನುಡಿದರು. 



ಅವರು ವೀರಲೋಕ ಬುಕ್ಸ್, ಬೆಂಗಳೂರು ಮತ್ತು ಗೋವಿಂದ ದಾಸ ಕಾಲೇಜಿನ ಸಾಹಿತ್ಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲೆಯ ಯುವ ಕಥೆಗಾರರಿಗೆ ಆಯೋಜಿಸಿದ್ದ ಎರಡು ದಿನಗಳ ದೇಸಿ ಜಗಲಿ ಕಥಾಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು. 



ಅಧ್ಯಕ್ಷತೆ ವಹಿಸಿದ್ದ ಗೋವಿಂದ ದಾಸ ಕಾಲೇಜಿನ ಪ್ರಾಚಾರ್ಯ ಪ್ರೊ.ಪಿ. ಕೃಷ್ಣಮೂರ್ತಿ ಕನ್ನಡ ಕಥನ ಪರಂಪರೆ ಅನನ್ಯವಾಗಿದ್ದು ಮಾನವೀಯ ಮೌಲ್ಯಗಳನ್ನು ಚಿತ್ರಿಸುವ ಕಥೆಗಳು ಮೂಡಿಬರಬೇಕು ಎಂದರು.



ಮುಖ್ಯ ಅತಿಥಿಯಾಗಿದ್ದ ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ ಮಾತನಾಡಿ ಸಾಹಿತ್ಯ ಸೃಷ್ಟಿ ವಿಶಿಷ್ಟ ಅನುಭವವಾಗಿದ್ದು ಉದಯೋನ್ಮುಖ ಕಥೆಗಾರರು ಹಿರಿಯರ ಮಾರ್ಗದರ್ಶನವನ್ನು ಪಡೆಯಬೇಕೆಂದರು. ಹಿರಿಯ ಕವಿ ರಘುರಾಮ ರಾವ್ ಬೈಕಂಪಾಡಿ ಹಾಗೂ ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ. ಶುಭ ಹಾರೈಸಿದರು. 



ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲಕ್ಷ್ಮಿ ಪಿ., ಸಾಹಿತಿ ಡಾ. ಗಣೇಶ್ ಅಮೀನ್ ಸಂಕಮಾರ್, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ಸುಧಾ ಆಡುಕುಳ, ಡಾ. ಜ್ಯೋತಿ ಚೇಳಾೈರು, ಡಾ. ಗಣನಾಥ ಎಕ್ಕಾರು, ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಥಾಕಮ್ಮಟದ ಸಂಚಾಲಕಿ ಡಾ. ನಿಕೇತನ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಕ್ಷತಾ ವಂದಿಸಿದರು. ಡಾ. ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top