ಆವರ್ಸೆ ಗ್ರಾಮ ಪಂಚಾಯತ್‌ನಲ್ಲಿ ಸಂವಿಧಾನ ಜಾಗೃತಿ ಜಾಥ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಆವರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು.


ಆವರ್ಸೆ ಸರ್ಕಾರಿ ಪ್ರೌಢಶಾಲೆಯ ಸ್ಟೂಡೆಂಟ್ ಪೊಲೀಸ್ ಕೆಡೆಟ್ ವಿದ್ಯಾರ್ಥಿಗಳು ಪಥ ಸಂಚಲನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 


ಕಾರ್ಯಕ್ರಮದಲ್ಲಿ ವಕೀಲ ಶಿರಿಯಾರ ಶ್ರೀ ಗೋಪಾಲಕೃಷ್ಣ ಶೆಟ್ಟಿ ಮಾತನಾಡಿ, ಸ್ವಾತಂತ್ಯ್ರ ಪೂರ್ವದಲ್ಲಿ ನಮ್ಮಲ್ಲಿ ಆಚರಣೆಯಲಿದ್ದ ಮೂಢನಂಬಿಕೆಗಳಿಗೆ ಸಂವಿಧಾನದ ಮೂಲಕ ಪರಿಹಾರ ದೊರೆಯಿತು. ಸಾರ್ವಜನಿಕರಿಗೆ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸಂವಿಧಾನ ಜಾಗೃತಿ ರಥ ಜಿಲ್ಲೆಯಾದ್ಯಂತ ಸಂಚರಿಸಲಿದೆ ಎಂದರು.


ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ರೋಷನ್ ಕುಮಾರ್ ಸಂವಿಧಾನ ಪೀಠಿಕೆಯನ್ನು ಭೋಧಿಸಿದರು. ಗ್ರಾಮ ಪಂಚಾಯತ್ ವತಿಯಿಂದ ಸಂವಿಧಾನ ಕುರಿತು ಆಯೋಜಿಸಲಾದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.


ಕಾಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಲಕ್ಷಣ ಪೂಜಾರಿ, ಉಪಾಧ್ಯಕ್ಷರು ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಆರತಿ, ಗ್ರಾಮ ಪಂಚಾಯತ್ ಸದಸ್ಯೆ ರೇಣುಕಾ, ಶಾಲಾ ಮುಖ್ಯೋಪಾಧ್ಯಾಯರು, ಸಂಘಟನೆಕಾರರಾದ ಸಂತೋಷ್ ಹಿಲಿಯಾಣ ಮತ್ತು ಅಣ್ಣಪ್ಪ ಕಿರಾಡಿ ಹಾಗೂ ಸಂಘಡಿಗರು, ಸಂಜೀವಿನಿ ಸಂಘ, ಆಶಾ ಕಾರ್ಯಕರ್ತೆಯರು, ಎಸ್.ಎಲ್.ಆರ್.ಎಮ್ ನೌಕರರು, ಯುವಕ ಮಂಡಲ ಮತ್ತು ಪಂಚಾಯತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತ್ ಪಿ.ಡಿ.ಓ ಸೀತಾರಾಮ ಆಚಾರಿ ಸ್ವಾಗತಿಸಿ, ನಿರೂಪಿಸಿದರು. ನೋಡಲ್ ಅಧಿಕಾರಿ ರಾಘವ ಶೆಟ್ಟಿ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)
Advt Slider:
To Top