ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 17 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಿಂದ ಸಂವಿಧಾನ ಜಾಗೃತಿ ಜಾಥ ಮೆರಣಿಗೆಯು ಸಾಂಪ್ರಾದಾಯಿಕ ಡೋಲುವಾದನನೊಂದಿಗೆ ಸಾಗಿತು.
ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್‌ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉಚ್ಚಿಲ ಸರಸ್ವತಿ ಪ್ರೌಢಶಾಶಾಲೆ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ ಸಂವಿಧಾನದ ಪ್ರಸ್ತಾವನೆ ಕುರಿತು ಪ್ರತಿಜ್ಞಾ ವಿಧಿ ಭೋಧಿಸಿದರು.
ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿಯ ಗಣೇಶ್ ನಾಯ್ಕ್, ಬಡಾ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದೀಪಕ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಕಛೇರಿ ಅಧೀಕ್ಷಕರು ವಿಜಯಲಕ್ಷ್ಮಿದಿನ್ನಿ, ಗ್ರಾಮ ಗ್ರಾಮ ಆಡಳಿತಾಧಿಕಾರಿ ಜಗದೀಶ್ ಹೆಚ್, ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ವ್ಯಾಪ್ತಿಯ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಡಾ ಗ್ರಾಮ ಪಂಚಾಯತ್ ಪಿ.ಡಿ.ಓ ಸತೀಶ್ ಆರ್.ಜೆ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ