ಉಡುಪಿ: ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 16 ರಂದು ಸಂವಿಧಾನಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು.
ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಮಣ್, ಸರ್ಕಾರಿ ಪದವಿ ಪೂರ್ವ ಕಾಲೇಜುಬೆಳ್ಮಣ್, ಸರ್ಕಾರಿ ಫ್ರೌಢಶಾಲೆ ಸೂಡ, ಸೈಂಟ್ ಜೋಸೆಫ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಬೆಳ್ಮಣ್, ಸೈಂಟ್ ಜೋಸೆಫ್ ಇಂಗ್ಲೀಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬೆಳ್ಮಣ್, ಹಿರಿಯ ಪ್ರಾಥಮಿಕ ಶಾಲೆ ಪುನಾರುಕೆರೆ ಇಲ್ಲಿಯ ವಿದ್ಯಾರ್ಥಿಗಳು ಪಥ ಸಂಚಲನ, ರಿಕ್ಷಾ ರ‍್ಯಾಲಿ, ಡಾ: ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂವಿಧಾನ ಕುರಿತು ಜಯಂತಿ ಶೆಟ್ಟಿ ಉಪನ್ಯಾಸ ನೀಡಿದರು. ಕಾರ್ಕಳ ಸಮಾಜ ಕಲ್ಯಾಣ ಇಲಾಖೆ, ವಾರ್ಡನ್ ವಿನಾಯಕ ಜಿ. ಬಾಳೇಗದ್ದೆ ಸಂವಿಧಾನ ಪೀಠಿಕೆಯನ್ನು ಭೋಧಿಸಿದರು.
ಸಂವಿಧಾನ ಕುರಿತಾದ ವಿವಿಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪಂಚಾಯತ್ ಅಧ್ಯಕ್ಷೆ ರಾಮೇಶ್ವರಿ ಎಂ. ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಬೆಳ್ಮಣ್ ಸ.ಪ.ಪೂ. ಕಾಲೇಜು ಉಪನ್ಯಾಸಕಿ ಶುಭಲಕ್ಷಿö್ಮ ಆರ್. ನಾಯಕ, ಪಂಚಾಯ್ ಉಪಾಧ್ಯಕ್ಷರಾದ ಸಂದೀಪ ಪೂಜಾರಿ, ಉಮೇಶ ನಾಯ್ಕ ಸೂಡಾ , ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ವರ್ಗದವರು, ಪೋಲೀಸ್ ಇಲಾಖೆ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯವರು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಳ್ಮಣ್ ಗ್ರಾಮ ಪಂಚಾಯತ್ ಸದಸ್ಯ ಜೇರಾಲ್ ಡಿಸೋಜ, ಸದಸ್ಯರು ಎಲ್ಲರನ್ನು ಸ್ವಾಗತಿಸಿ, ಬೆಳ್ಮಣ್ ಗ್ರಾಮ ಪಂಚಾಯತ್ ಪಿಡಿಓ ಮಮತಾ ವೈ ಶೆಟ್ಟಿ ನಿರೂಪಿಸಿ, ಬೆಳ್ಮಣ್ ಗ್ರಾಮ ಪಂಚಾಯತ್ ಸದಸ್ಯ ದೇವೇಂದ್ರ ನಾಯಕ ವಂದನೆಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ