ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ನಮ್ಮ ಸಂವಿಧಾನವೇ ಮೂಲ

Upayuktha
0

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

 


ಉಡುಪಿ: ನಮ್ಮ ದೇಶದ ಪ್ರಜಾಪ್ರಭ್ವುತ ವ್ಯವಸ್ಥೆ ಗಟ್ಟಿಗೊಳಿಸಲು ಸಂವಿಧಾನವೇ ಮೂಲ ಕಾರಣ. ಅದರ ಆಶಯದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕರರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.


ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ    ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಸರಕಾರಿ ಪಾಲಿಟೆಕ್ನಿಕ್ ಹಾಗೂ ಡಯಟ್ ಉಡುಪಿ ಇವರ ಸಹಯೋಗದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

    

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಭುಗಳ ಆಯ್ಕೆ ಪ್ರಜೆಗಳಿಂದ ಆದರೂ ಇಬ್ಬರು ಸಂವಿಧಾನದ ಚೌಕಟ್ಟಿನಲ್ಲಿಯೇ ಒಳಪಡುತ್ತಾರೆ. ದೇಶದ ಪ್ರತಿಯೊಂದು ಕಾನೂನು ಸಂವಿಧಾನದ ಅಡಿಯಲ್ಲಿ ಬರುತ್ತದೆ. ಪ್ರತಿಯೊಂದಕ್ಕೂ ಸಂವಿಧಾನವೇ ಮೂಲ. ಸಂವಿಧಾನವನ್ನು ಗೌರವಿಸುವುದು, ಅದಕ್ಕೆ ಬದ್ಧವಾಗಿರುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.  

    

ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸುವುದರೊಂದಿಗೆ ಸದೃಢ ಭಾರತ ನಿರ್ಮಾಣ ಮಾಡಿದ್ದಲ್ಲಿ ಭವಿಷ್ಯದಲ್ಲಿ ನಮ್ಮ ಮುಂದಿನ ಪೀಳಿಗೆ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ನಮ್ಮ ನೆರೆ ಹೊರೆ ಸೇರಿದಂತೆ ಅನೇಕ ದೇಶಗಳಲ್ಲಿ ಅರಾಜ್ಯಕತೆ ಆಗಿರುವುದು ನಮ್ಮ ಕಣ್ಣ ಮುಂದೆ ಇವೆ ಎಂದ ಅವರು, ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಂಡಲ್ಲಿ ಸದೃಢ ದೇಶವಾಗಲು ಸಾಧ್ಯ ಎಂದರು. 

   

ರಾಜ್ಯ ಸರ್ಕಾರ ಸಂವಿಧಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿಯನ್ನು ರಾಜ್ಯದಾದ್ಯಂತ ಕೈಗೊಂಡಿದೆ. ಜಿಲ್ಲೆಯ ೧೫೫ ಗ್ರಾಮ ಪಂಚಾಯತಿಗಳು ಹಾಗೂ ೬  ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರದೊಂದಿಗೆ ಜಾಗೃತಿ ಮೂಡಿಸುವ ಕಾರ್ಯಗಳನ್ನು ಹಾಗೂ ಅನೇಕ ಬೈಕ್ ರ‍್ಯಾಲಿಗಳು, ಕಡಲ ತೀರದಲ್ಲಿ ವಿಶೇಷ ಕಾರ್ಯಕ್ರಮಗಳು, ಕ್ರೀಡಾಪಂದ್ಯಗಳು ಸೇರಿದಂತೆ ಮತ್ತಿತರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ ಎಂದರು. 

    

ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಸಂವಿಧಾನದ ಪೀಠಿಕೆ ಬೋಧಿಸಿದರು.

    

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನಿತಾ ಮಡ್ಲೂರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಪ್ರಾಂಶುಪಾಲೆ ಡಾ. ಸುಮಾ, ಮೂಡುಬೆಳ್ಳೆ ಕಾಲೇಜಿನ ಪ್ರಾಂಶುಪಾಲ ಎಡ್ವರ್ಡ್, ಪಾಲಿಟೆಕ್ನಿಕ್ ಕಾಲೇಜಿನ ಶಿವಪ್ರಸಾದ್ ಶೆಟ್ಟಿ ಹಾಗೂ ಸುನಿಲ್, ಡಯಟ್‌ನ ಸಿಬ್ಬಂದಿಗಳು, ಆರಕ್ಷಕರು, ಉಪನ್ಯಾಸಕರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಯಾನಂದ ಸ್ವಾಗತಿಸಿ, ನಿರೂಪಿಸಿ, ಮಲ್ಪೆ ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ವಂದಿಸಿದರು.

     

ಕಾರ್ಯಕ್ರಮಕ್ಕೂ ಮುನ್ನು ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ ಸಿಟಿ ಬಸ್ ಮಾರ್ಗವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿವರೆಗೆ ಚಂಡೆ ವಾದ್ಯಗಳೊಂದಿಗೆ ಸಾಗಿತು. ಬೈಕ್ ರ‍್ಯಾಲಿಗೆ ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಪ್ರಬಂಧಕ ಗಣೇಶ್ ಚಾಲನೆ ನೀಡಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top