ಪೆರ್ಡೂರು ಗ್ರಾಮ ಪಂಚಾಯತ್‌ನಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ

Upayuktha
0


ಉಡುಪಿ:  ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಸಂವಿಧಾನ ದಿನಾಚರಣೆ ಪ್ರಯುಕ್ತ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರವಿವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನೆರವೇರಿತು. 


ಈ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವು ಪೆರ್ಡೂರು ಪ್ರೌಢಶಾಲೆಯಿಂದ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್, ಬೈಕ್ ರ‍್ಯಾಲಿ ಮತ್ತು ಚಂಡೆವಾದನದೊಂದಿಗೆ ಆಗಮಿಸಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಸದಸ್ಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಗಣನಾಥ ಎಕ್ಕಾರು ಮಾತನಾಡಿ, ಸಂವಿಧಾನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

   

ಸಮಾಜ ಕಲ್ಯಾಣ ಇಲಾಖೆ ಕಛೇರಿ ಅಧಿಕ್ಷಕಿ ವಿಜಯಲಕ್ಷಿ ದಿನ್ನಿ ರವರು ಭಾರತ ಸಂವಿದಾನದ ಪ್ರಸ್ತಾವನೆ ಕುರಿತು ಪ್ರತಿಜ್ಞಾ ವಿಧಿ ಭೋಧಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್, ಗಾಂಧೀಜಿ, ಭಾರತಮಾತೆ ಮತ್ತು ಯಕ್ಷಗಾನ ಛಧ್ಮವೇ಼ಷವು ಕಾರ್ಯಕ್ರಮಕ್ಕೆ ಮೆರಗು ನೀಡಿತು.

    

ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಏರ್ಪಡಿಸಿದ ಸಂವಿಧಾನ ಕುರಿತಾದ ಭಾಷಣ, ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ದೇವು ಪೂಜಾರಿ ಪಿ.ಡಿ.ಓ ಸುಮನಾ ಕೆ, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ವಿವಿಧ ಸಂಘಟನೆಗಳ ಸದಸ್ಯರುಗಳು, ಸಂಘ ಸಂಸ್ಥೆಯವರು, ಗ್ರಾಮಲೆಕ್ಕಿಗ


ಗುರುಪ್ರಸಾದ್, ಸಂಘಟನಾಕಾರರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು,


ಪಂಚಾಯತ್ ವ್ಯಾಪ್ತಿಯ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದ, ಸಂಜೀವಿನಿ ಸಂಘದ ಸದಸ್ಯರು, ಎಸ್.ಎಲ್.ಆರ್.ಎಮ್ ಸಂಘದ ಪದಾಧಿಕಾರಿಗಳು ಹಾಗೂ ಮತ್ತಿತರರು  ಉಪಸ್ಥಿತರಿದ್ದರು. 


ಗ್ರಾಮ ಪಂಚಾಯತ್ ಪಿ.ಡಿ.ಓ ಸುಮನಾ.ಕೆ ಸ್ವಾಗತಿಸಿದರು. 

 


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top