ಉಡುಪಿ: ಫೆ.19 ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮವನ್ನು ಫೆಬ್ರವರಿ 19 ರಂದು ಬೆಳಗ್ಗೆ 10 ಗಂಟೆಗೆ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಾಜು ಮೊಗವೀರ ಅಧ್ಯಕ್ಷತೆ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಯ್ಯ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ. ಪುರ್ಟಾಡೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖೆಯ  ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಭಾಗವಹಿಸಲಿದ್ದು,  ಜಿಲ್ಲಾ ವಕೀಲರು ಹಾಗೂ ಉಪ ಕಾನೂನು ನೆರವು ಅಧಿರಕ್ಷಕರು ಶ್ರೀನಿವಾಸ ಉಪಾಧ್ಯ. ಬಿ, ನೇಟಿವ್ ಸಂಸ್ಥೆಯ ಮುಖ್ಯಸ್ಥ  ಪ್ರೇಮಾನಂದ ಕಲ್ಮಾಡಿ  ಉಪನ್ಯಾಸ ನೀಡಲಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top