ಕೆರ್ಗಾಲು ಗ್ರಾಮ ಪಂಚಾಯತ್ ವತಿಯಿಂದ ಸಂವಿಧಾನ ಜಾಗೃತಿ ರಥಕ್ಕೆ ಅದ್ಧೂರಿ ಸ್ವಾಗತ

Upayuktha
0

 


ಉಡುಪಿ: ಸಂವಿಧಾನ ಮಹತ್ವ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಇಂದು ಕೆರ್ಗಾಲು ಗ್ರಾಮ ಪಂಚಾಯತ್ ವತಿಯಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಕೆರ್ಗಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಪೂಜಾರಿ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಲ್ಲಿ ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಕುರಿತು ಮಾಹಿತಿ ನೀಡುತ್ತಾ ಸಾಗುತ್ತದೆ. ಸಮಾನತೆಯನ್ನು ಆಡಳಿತದ ತತ್ವವಾಗಿ ಸ್ವೀಕರಿಸಬೇಕು. ಮಕ್ಕಳಿಗೆ ಧಾರ್ಮಿಕತೆಯನ್ನು ಬೋಧಿಸುವುದರೊಂದಿಗೆ ಮೂಢನಂಬಿಕೆಯಿಂದ ಹೊರಬಂದು ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು ಎಂದರು. 


ಶಿಕ್ಷಕ ಪ್ರದೀಪ್ ಸಂವಿಧಾನ ಮಹತ್ವ ಕುರಿತು ಉಪನ್ಯಾಸ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ನೋಡೆಲ್ ಅಧಿಕಾರಿ ನಾಗೇಶ್ ನಾಯ್ಕ್, ಸಮಾಜ ಕಲ್ಯಾಣ ಅಧಿಕಾರಿ ರಾಘವೇಂದ್ರ ವೆರ್ಣೇಕರ್, ಸಂಜೀವಿನಿ ಸಂಘದ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಗ್ರಾಮ ಪಂಚಾಯತ್ ವರೆಗೆ ಸಂವಿಧಾನ ಜಾಗೃತಿ ಜಾಥಾವು ಸಾಗಿತು. 




 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

Post a Comment

0 Comments
Post a Comment (0)
To Top