ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್.ಪಿ ಸರ್ಚ್ ವಾರೆಂಟ್‌ದೊಂದಿಗೆ ತನಿಖೆ

Upayuktha
0

 


ಉಡುಪಿ: ಕರ್ನಾಟಕ  ಲೋಕಾಯುಕ್ತದ ಉಪ ಲೋಕಾಯುಕ್ತರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿವಿಧ ಕಛೇರಿಗಳಿಗೆ ಅನೀರಿಕ್ಷಿತ ಭೇಟಿ ಹಾಗೂ  ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕಾರ್ಯಕ್ರಮವೊಂದರಲ್ಲಿ ವಕೀಲರರೊಬ್ಬರು  ಸಾರ್ವಜನಿಕರು ಉಡುಪಿ ನೋಂದಾಣಿ ಕಛೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು  ಮೌಖಿಕವಾಗಿ ದೂರಿದ  ಹಿನ್ನಲೆ ಉಪ ಲೋಕಾಯುಕ್ತರಾದ ಹಾಗೂ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ರವರು ಉಡುಪಿ ನೋಂದಾಣಿ ಕಛೇರಿಯ ತನಿಖೆಗೆ  ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು. 


ಮಂಗಳೂರಿನ  ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ  ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಆಗದೇ ಇರುವುದು ಕಂಡುಬಂದಿತ್ತು ಈ ಪರಿಶೀಲನೆ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.   




  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top