ಉಡುಪಿ: ಮಕ್ಕಳ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಮಹತ್ವವಾದುದು. ಸಾರ್ವಜನಿಕರು ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಮಕ್ಕಳಿಂದ ಜರಗುವ ಅಪರಾಧವನ್ನು ತಡೆಗಟ್ಟುವ ಮೂಲಕ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಸುಸ್ಥಿರ ಸಮಾಜವನ್ನು ನಿರ್ಮಾಣಗೊಳಿಸಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.
ಅವರು ಶನಿವಾರ ನಗರದ ಬನ್ನಂಜೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ವಸತಿ ನಿಲಯದ ಮೇಲ್ವಿಚಾರಕರು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಬಾಲನ್ಯಾಯ ಕಾಯ್ದೆ 2015 ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012, ಬಾಲ್ಯ ವಿವಾಹ ಕಾಯ್ದೆ ಹಾಗೂ ಬಾಲ ಕಾರ್ಮಿಕತೆ ಹಾಗೂ ಭಿಕ್ಷಾಟನೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳು ಅಪರಾಧವನ್ನು ಮಾಡುವ ಉದ್ದೇಶವನ್ನು ತಿಳಿಯುವುದರೊಂದಿಗೆ, ಅಪರಾಧವನ್ನು ಮಾಡುವಾಗ ಮಕ್ಕಳ ಮನಸ್ಥಿತಿಯ ಕುರಿತು ಅರಿತು ಮಕ್ಕಳೊಂದಿಗೆ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬುದರ ಅರಿವು ಪೊಲೀಸರಿಗಿರಬೇಕು. ಪೊಲೀಸರು ಮಕ್ಕಳ ಕುರಿತಾದ ಕಾನೂನುಗಳು ಬದಲಾದಂತೆ ಕಾನೂನಿನ ತಿಳುವಳಿಕೆಯನ್ನು ಪಡೆದುಕೊಳ್ಳಲು ಕಾರ್ಯಾಗಾರ ತರಬೇತಿ ಅತ್ಯವಶ್ಯಕವಾಗಿದ್ದು, ಪ್ರತಿಯೊಬ್ಬರು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಕಾನೂನಿನ ತಿದ್ದುಪಡಿಗಳು ಗಮನಕ್ಕೆ ಬರದೇ ಹೋದಾಗ ಕಾನೂನಿನ ಪುನರ್‌ಮನನಗೊಳಿಸಲು ಕಾರ್ಯಾಗಾರವು ಸಹಕಾರಿಯಾಗಲಿದ್ದು, ಅವುಗಳನ್ನು ತಿಳಿದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳು ಸೂಕ್ಷö್ಮ ಮನೋಭಾವದವರಾಗಿದ್ದು ಸಮಾಜದಲ್ಲಿ ನಡೆಯುವ ಅಪಾಯಗಳ ಗಂಭೀರತೆಯ ಅರಿವು ಅವರಿಗೆ ಇರುವುದಿಲ್ಲ. ಹಾಗಾಗಿ ಶೀಘ್ರವಾಗಿ ಅನೇಕ ಸಮಸ್ಯೆಗಳಿಗೆ ಒಳಗಾಗುತ್ತಾರೆ, ಮಕ್ಕಳಿಗೆ ಸಂಬAಧಪಟ್ಟ ಇಲಾಖೆಗಳು ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ, ಕರಾವಳಿ ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣೆ ಕಾಯ್ದೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿರುವುದು ಸಂತಸದ ವಿಚಾರವಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಡುಪಿ ಜಿಲ್ಲೆಯು ಮಾದರಿಯಾಗಲಿ ಎಂದರು.
ಬಾಲ್ಯದಲ್ಲಿ ನಕರಾತ್ಮಕ ಅನುಭವಗಳನ್ನು ಅನುಭವಿಸಿ ಮಕ್ಕಳು ಯೌವನದಲ್ಲಿ ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳಲ್ಲಿ ಉಂಟಾಗುವ ಅನೇಕ ಬದಲಾವಣೆಗಳಿಗೆ ನಾವು ಸ್ಪಂದಿಸಿದಾಗ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯವಾಗುತ್ತದೆ ಎಂದ ಅವರು, ದೇಶದಲ್ಲಿ ಅನೇಕ ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸದೆ ಸಮಸ್ಯೆಗಳನ್ನು ಎದುರಿಸಿಕೊಂಡು ಬಂದಿದ್ದು ಅಂತಹ ಗುಂಪುಗಳನ್ನು ಗುರುತಿಸಿ ಸಮಾಜದಲ್ಲಿ ಅವರಿಗೆ ಉತ್ತಮ ಜೀವನವನ್ನು ಕಲ್ಪಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಎಸ್‌ಪಿ ಡಾ. ಸಿದ್ಧಲಿಂಗಪ್ಪ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿಘ್ನೇಶ್ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಂiÀiðದರ್ಶಿ ಶರ್ಮಿಳಾ ಎಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ಪೊಲೀಸ್ ಮಹಾನಿರ್ದೇಶಕ ತರಬೇತಿ ಕಛೇರಿಯ ಪೊಲೀಸ್ ತರಬೇತುದಾರ ರೋಹಿತ್ ಮತ್ತು ಮೈಸೂರು ಪೊಲೀಸ್ ಆಯುಕ್ತರ ಕಚೇರಿಯ ಪೊಲೀಸ್ ತರಬೇತುದಾರ ಪ್ರಸನ್ನ ಕುಮಾರ್ ಜಿ.ಎಸ್ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ಎಮ್ ಸ್ವಾಗತಿಸಿ, ಪ್ರಕಾಶ್ ಹಾವಂಜೆ ನಿರೂಪಿಸಿ, ಕಪಿಲಾ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ