ಮಾನವ ಕಳ್ಳತನ ಸಾಗಾಣಿಕೆ ತಡೆಗಟ್ಟಲು ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ

Upayuktha
0

ಹಿರಿಯ ಸಿವಿಲೆ ನ್ಯಾಯಾಧೀಶೆ ಶರ್ಮಿಳಾ ಎಸ್ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮ ಉದ್ಘಾಟನೆ


       

ಉಡುಪಿ: ಮಾನವ ಕಳ್ಳತನ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಕೆಯಾಗಿ ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಸೂಕ್ತ ಕಾನೂನಿನ ಕ್ರಮವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.


ಅವರು ಸೋಮವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ನಡೆದ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದರು.

   

ದೇಶದಲ್ಲಿ ಇಂತಹ ಅಪರಾಧಗಳನ್ನು ತಡೆಗಟ್ಟಲು ಅತ್ಯುತ್ತಮ ಕಾನೂನು ವ್ಯವಸ್ಥೆಗಳು ಇದ್ದರೂ ಸಹ, ಕಾನೂನುಗಳ ಅರಿವು ಹಾಗೂ ಸಮನ್ವಯದ ಕೊರತೆಯಿಂದಾಗಿ ಮಾನವ ಕಳ್ಳ ಸಾಗಾಣಿಕೆಯು ಬೆಳೆಯುತ್ತಿದ್ದು, ಕಾನೂನುಗಳನ್ನು ದುರುಪಯೋಗ ಪಡೆಸಿಕೊಳ್ಳಲಾಗುತ್ತಿದೆ. ಕಾನೂನುಗಳನ್ನು ಸದುಪಯೋಗ ಹಾಗೂ ಅವುಗಳನ್ನು ಬಳಸಿಕೊಳ್ಳುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಅತ್ಯವಶ್ಯಕ ಎಂದರು.

  

ಸಮಾಜದಲ್ಲಿ ಯಾವುದೇ ಜಾತಿ, ವಯಸ್ಸು ಧರ್ಮ ಹಾಗೂ ಲಿಂಗ ಭೇದಗಳಿಲ್ಲದೆ ಪ್ರತಿಯೊಬ್ಬರು ಇಂತಹ ದೌರ್ಜನ್ಯಕ್ಕೆ ಒಳಗಾಗುವುದನ್ನು ನಾವು ಕಾಣಬಹುದಾಗಿದ್ದು, ನಾಗರಿಕರು ಕಾನೂನುಗಳ ಕುರಿತು ಜ್ಞಾನ ಹೊಂದಿದಾಗ ಅಪರಾಧವನ್ನು ತಡೆಗಟ್ಟಬಹುದಾಗಿದೆ ಎಂದರು. 

    

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಮಾನವ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಸೇರಿದಂತೆ ಮತ್ತಿತರರ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯಪ್ರವೃತ್ತರಾಗುವುದರೊಂದಿಗೆ ಪ್ರಕರಣಗಳು ಆಗದಂತೆ ಎಚ್ಚರವಹಿಸಬೇಕು ಎಂದರು. 

     

ಜಿಲ್ಲಾ ವಕೀಲ ಹಾಗೂ ಉಪ ಕಾನೂನು ನೆರವು ಅಧಿರಕ್ಷಕ ಶ್ರೀನಿವಾಸ ಉಪಾಧ್ಯ. ಬಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆ ಹಾಗೂ ಐ.ಟಿ.ಪಿ.ಎ 1956 ಕಾಯ್ದೆಯ ಅನುಷ್ಠಾನ ಹಾಗೂ  ನೇಟಿವ್ ಸಂಸ್ಥೆಯ ಮುಖ್ಯಸ್ಥ ಪ್ರೇಮಾನಂದ ಕಲ್ಮಾಡಿ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕ ತಡೆ ಕುರಿತು ಕ್ರಮಬದ್ದ ಕಾರ್ಯವಿಧಾನ ಎಂಬ ವಿಷಯದ  ಕುರಿತು ಉಪನ್ಯಾಸ ನೀಡಿದರು.

     

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಸ್ವಾಗತಿಸಿ, ದೀಪಾ ನಿರೂಪಿಸಿ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top